ಮರಾಠ ಪ್ರಾಧಿಕಾರ ವಿರೋಧಿಸಿ ಡಿ.5ಕ್ಕೆ ರಾಜ್ಯ ಬಂದ್'ಗೆ ಕನ್ನಡಪರ ಸಂಘಟನೆಗಳ ಕರೆ 

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಿರುವ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದಿರುವ ಕನ್ನಡ ಸಂಘಟನೆಗಳು ಈ ತೀರ್ಮಾನವನ್ನು ಹಿಂಪಡೆಯಲು ನ.27ರವರೆಗೂ ಸರ್ಕಾರಕ್ಕೆ ಗಡುವು ನೀಡಿದ್ದು, ಅಷ್ಟರೊಳಗೆ ನಿರ್ಧಾರ ಹಿಂಪಡೆಯದೇ ಹೋದರೆ ಡಿ.5ರಂದು ಕರ್ನಾಟಕ ಬಂದ್ ನಡೆಸುವುದಾಗಿ ಎಚ್ಚರಿಸಿವೆ. 
ಮುಖ್ಯಮಂತ್ರಿಗಳ ನಿರ್ಧಾರದ ವಿರುದ್ಧ ಕನ್ನಡ ಪರ ಸಂಘಟನೆಗಳು ನಿನ್ನೆ ಪ್ರತಿಭಟನೆ ನಡೆಸಿದರು.
ಮುಖ್ಯಮಂತ್ರಿಗಳ ನಿರ್ಧಾರದ ವಿರುದ್ಧ ಕನ್ನಡ ಪರ ಸಂಘಟನೆಗಳು ನಿನ್ನೆ ಪ್ರತಿಭಟನೆ ನಡೆಸಿದರು.

ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಿರುವ ರಾಜ್ಯ ಸರ್ಕಾರದ ವಿರುದ್ಧ ಪ್ರತಿಬಠನೆಗೆ ಿಳಿದಿರುವ ಕನ್ನಡ ಸಂಘಟನೆಗಳು ಈ ತೀರ್ಮಾನವನ್ನು ಹಿಂಪಡೆಯಲು ನ.27ರವರೆಗೂ ಸರ್ಕಾರಕ್ಕೆ ಗಡುವು ನೀಡಿದ್ದು, ಅಷ್ಟರೊಳಗೆ ನಿರ್ಧಾರ ಹಿಂಪಡೆಯದೇ ಹೋದರೆ ಡಿ.5ರಂದು ಕರ್ನಾಟಕ ಬಂದ್ ನಡೆಸುವುದಾಗಿ ಎಚ್ಚರಿಸಿವೆ. 

ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮರಾಠರಿಗಾಗಿ ಪ್ರತ್ಯೇಕ ಪ್ರಾಧಿಕಾರ ರಚಿಸಿ ರೂ.50 ಕೋಟಿ ಅನುದಾನ ನೀಡಿರುವ ಸರ್ಕಾರದ ತೀರ್ಮಾನ ವಿರುದ್ಧ ಕನ್ನಡ ಪರ ಸಂಘಟನೆಗಳು ರಸ್ತೆಗಿಳಿದಿವೆ. 

ನಿನ್ನೆಯಷ್ಟೇ ಕನ್ನಡ ಪರ ಸಂಘಟನೆಗಳ ಒಕ್ಕೂಟವು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪ್ರತಿಕೃತಿ ದಹನ ನಡೆಸಿ ಪ್ರತಿಭಟನೆ ನಡೆಸಿದರೆ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸಿಎಂ ನಿವಾಸಕ್ಕೆ ಮುತ್ತಿಗೆ ಪ್ರಯತ್ನ ನಡೆಸಿ ಬಂಧನಕ್ಕೊಳಗಾದರು. 

ಈ ವೇಳೆ ಮಾತನಾಡಿರುವ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು, ಕರ್ನಾಟಕದಲ್ಲಿ ಮರಾಠಿಗರ ಅಭಿವೃದ್ಧಿಗೆ ಪ್ರಾಧಿಕಾರ ರಚನೆ ಮಾಡಲು ಮುಂದಾಗಿರುವುದು ಕನ್ನಡಿಗರ ಅಳಿವು ಉಳಿವಿನ ಪ್ರಶ್ನೆಯಾಗಿದೆ. ರಾಜ್ಯದಲ್ಲಿ ಮರಾಠ ಪ್ರಾಧಿಕಾರ ರಚನೆಯಾದರೆ ಕನ್ನಡಿಗರಿಗೆ ಅಂತ್ಯ ಹಾಡಿದಂತೆ. ಡಿ.5ರಂದು ಕರ್ನಾಟಕ ಬಂದ್ ಕುರಿತು ನ.27ರ ವೇಳೆಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಅಷ್ಟರೊಳಗೆ ರಾಜ್ಯ ಸರ್ಕಾರ ಈ ತೀರ್ಮಾನವನ್ನು ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ. 

ಬೀದರ್ ಜಿಲ್ಲೆ, ಬೆಳಗಾವಿ ಮತ್ತು ಬಸವಕಲ್ಯಾಣದಲ್ಲಿ ಮರಾಠಿಗರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮರಾಠಿಗರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ಧಾರ್ಮಿಕ ಅಭಿವೃದ್ಧಿಗಾಗಿ ಮರಾಠಾ ಅಭಿವೃದ್ಧಿ ಪ್ರಾಧಿಕಾರವನ್ನು ಸ್ಥಾಪಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಹೇಳಿದ್ದರು. 

ಮರಾಠ ಪ್ರಾಧಿಕಾರ ವಿರೋಧಿಸಿ ಮಹಾರಾಷ್ಟ್ರ ವಾಹನಗಳಿಗೆ ತಡೆ; ಚಾಲಕರ ಒಕ್ಕೂಟ ಎಚ್ಚರಿಕೆ
ಮರಾಠರ ಅಭಿವೃದ್ಧಿಗೆ ಬಿ.ಎಸ್.ಯಡಿಯೂರಪ್ಪ ಸರ್ಕಾರ 50 ಕೋಟಿ ರೂ. ಅನುದಾನ ನೀಡಿರುವುದನ್ನು ಚಾಲಕರ ಒಕ್ಕೂಟಗಳು ತೀವ್ರವಾಗಿ ಖಂಡಿಸಿದ್ದು, ಇದಕ್ಕಾಗಿ ಎಚ್‍.ಡಿ.ಕುಮಾರಸ್ವಾಮಿ ಅವಧಿಯಲ್ಲಿ ಚಾಲಕರಿಗೆ ಬಿಡುಗಡೆಯಾಗಿದ್ದ 60 ಕೋಟಿ ಹಣವನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಇಂಡಿಯನ್ ವೆಹಿಕಲ್ಸ್ ಡ್ರೈವರ್ಸ್ ಟ್ರೇಡ್ ಯೂನಿಯನ್ ಅಧ್ಯಕ್ಷ ಗಂಡಸ ಸದಾನಂದಸ್ವಾಮಿ ಆಕ್ರೋಶ ವ್ರಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಎಚ್‍.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಚಾಲಕರ ದಿನಾಚರಣೆ ಹಾಗೂ ಸಾರಥಿ ಸೂರಿಗೆ 60 ಕೋಟಿ ರೂ. ಅನುದಾನವನ್ನು ಬಜೆಟ್‍ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಹಣವನ್ನು ಚಾಲಕರಿಗೆ ನೀಡದೆ ವಂಚಿಸಿ ಇದೀಗ ಬಿ ಎಸ್. ಯಡಿಯೂರಪ್ಪ ಸರ್ಕಾರ ಮರಾಠರ ಅಭಿವೃದ್ಧಿಗೆ ಮುಂದಾಗಿದೆ. ಇದು ಖಂಡನೀಯ ಎಂದು ಸದಾನಂದಸ್ವಾಮಿ ತಿಳಿಸಿದ್ದಾರೆ.

ಲಾಕ್ ಡೌನ್ ನಂತರದಲ್ಲಿ ಟ್ಯಾಕ್ಸಿಗಳಲ್ಲಿ ಬಾಡಿಗೆ ಇಲ್ಲದೆ ಸಾವಿರಾರು ಚಾಲಕರು ಊರು ಬಿಟ್ಟಿದ್ದಾರೆ. ಇಎಂಐ ಕಟ್ಟಲಾಗದೆ ಫೈನಾನ್ಸ್ ಕಂಪನಿಕಗಳ ಕಿರುಕುಳಕ್ಕೆ ಬೇಸತ್ತು ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದು ಹೊಟ್ಟೆಯ ಮೇಲೆ ತಣ್ಣೀರು ಬಟ್ಟೆ ಎಂಬಂತಾಗಿದೆ. ಇಂತಹ ಸಂದರ್ಭದಲ್ಲಿ ಚಾಲಕರ ಪರ ನಿಂತು ಅವರ ಕಷ್ಟಗಳಿಗೆ ಸ್ಪಂಧಿಸಬೇಕಾದ ಸರ್ಕಾರ ಚಾಲಕರ ಹಣದಲ್ಲಿ ಬೇರೆಯವರ ಅಭಿವೃದ್ಧಿ ಮಾಡುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮರಾಠರಿಗೆ ನೀಡಿರುವ ಹಣವನ್ನು ಕೂಡಲೇ ಹಿಂಪಡೆಯಬೇಕು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com