ಡಿಸೆಂಬರ್ ಮೊದಲ ವಾರ ವಿಧಾನ ಮಂಡಲ ಚಳಿಗಾಲದ ಅಧಿವೇಶನ: ಇಂದು ಸಂಪುಟ ಸಭೆಯಲ್ಲಿ ತೀರ್ಮಾನ ಸಾಧ್ಯತೆ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಾಳೆ ವಿಧಾನಸೌಧದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿಪಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಾಳೆ ವಿಧಾನಸೌಧದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿಪಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ವಿಧಾನಸೌಧದಲ್ಲಿ ನಾಳೆ ಬೆಳಗ್ಗೆ 10.30ಕ್ಕೆ ಸಚಿವ ಸಂಪುಟ ಸಭೆ ನಡೆಯದ್ದು,ಈ ಸಭೆಯಲ್ಲಿ ಚಳಿಗಾಲದ ಅಧಿವೇಶನದ ವೇಳಾ ಪಟ್ಟಿ ಅಂತಿಮಗೊಳಿಸ ಲಾಗುವುದು.ಅಲ್ಲದೆ, 2020-21ನೇ ಸಾಲಿನ ಸಾರ್ವತ್ರಿಕ ರಜೆ ಮತ್ತು ಪರಿಮಿತ ರಜೆಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಬೆಳಗಾವಿ ನಗರದ ದಕ್ಷಿಣ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಸಲುವಾಗಿ ತಯಾರಿಸಲಾದ 28.63 ಕೋಟಿ ರು.ಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಸಾಧ್ಯತೆಯಿದೆ.

ಬಳ್ಳಾರಿ ಜಿಲ್ಲೆಯ ಹೊಸಪೇಟೆ ನಗರ ಸಭೆಯ ವ್ಯಾಪ್ತಿಯಲ್ಲಿ ಸುಸಜ್ಜಿತ ತರಕಾರಿ ಮಾರುಕಟ್ಟೆ ನಿರ್ಮಾಣಕ್ಕೆ 13.85 ಕೋಟಿ ರೂ ಆಡಳಿತಾತ್ಮಕ ಅನುಮೋದನೆ ನೀಡುವುದು. ಕರ್ನಾಟಕ ಕೃಷಿ ಸೇವೆಗಳು(ನೇಮಕಾತಿ) ನಿಯಮ 2020ಕ್ಕೆ ಅನುಮೋದನೆ ನೀಡುವುದು ಹಾಗೂ ಕೃಷ್ಣ ಜಲಭಾಗ್ಯ, ಕರ್ನಾಟಕ ನೀರಾ ವರಿ ನಿಗಮ, ಕಾವೇರಿ ನೀರಾವರಿ ನಿಗಮ,ವಿಶ್ವೇಶ್ವರಯ್ಯ ಜಲ ನಿಗಮಗಳಿಗೆ ಒಟ್ಟು 1650 ಕೋಟಿ ರೂ ಸಾಲ ಸಂಗ್ರಹಿಸಲು ಅನುಮೋದನೆ ನೀಡುವ ಸಾಧ್ಯತೆಗಳಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com