ರಾಜ್ಯದಲ್ಲಿ ಮತ್ತೆ ಹೆಚ್ಚಾಗುತ್ತಿದೆ ಕೊರೋನಾ: ಇಂದು ಬೆಂಗಳೂರಿನಲ್ಲಿ 1,048 ಸೇರಿ 1,849 ಮಂದಿಗೆ ಪಾಸಿಟಿವ್!

ರಾಜ್ಯದಲ್ಲಿ ದಿನ ಕಳೆದಂತೆ ಕೊರೋನಾ ಮತ್ತೆ ಏರಿಕೆಯಾಗುತ್ತಿದೆ. ಇಂದು 1,849 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಸೋಂಕಿನ ಸಂಖ್ಯೆ 8,67,780ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ದಿನ ಕಳೆದಂತೆ ಕೊರೋನಾ ಮತ್ತೆ ಏರಿಕೆಯಾಗುತ್ತಿದೆ. ಇಂದು 1,849 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಸೋಂಕಿನ ಸಂಖ್ಯೆ 8,67,780ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 26 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 11,604 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು 1,800 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ 8,30,988 ಮಂದಿ ಚೇತರಿಸಿಕೊಂಡಿದ್ದಾರೆ. ಇನ್ನು 25,169 ಸಕ್ರೀಯ ಪ್ರಕರಣಗಳಿದ್ದು ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಬೆಂಗಳೂರಿನಲ್ಲಿ ಇಂದು 1,048 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,60,587ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ 14 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 4,042ಕ್ಕೆ ಏರಿಕೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com