ಜಮೀನು ವಿವಾದ: ಪತ್ನಿಯನ್ನು ಹತ್ಯೆ ಮಾಡಿದ ಪತಿ, ಪುತ್ರ ಗಂಭೀರ

ಮನೆಯ ಜಮೀನಿನ ವಿಚಾರಕ್ಕೆ ಕುಡಿದ ಅಮಲಿನಲ್ಲಿ ಪತಿಯೋರ್ವ ತನ್ನ ಹೆಂಡತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ಪಟ್ಟಣದಲ್ಲಿ ಗುರುವಾರ ಮುಂಜಾನೆ ನಡೆದಿದೆ.

Published: 19th November 2020 10:11 AM  |   Last Updated: 19th November 2020 12:51 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : UNI

ತುಮಕೂರು: ಮನೆಯ ಜಮೀನಿನ ವಿಚಾರಕ್ಕೆ ಕುಡಿದ ಅಮಲಿನಲ್ಲಿ ಪತಿಯೋರ್ವ ತನ್ನ ಹೆಂಡತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ಪಟ್ಟಣದಲ್ಲಿ ಗುರುವಾರ ಮುಂಜಾನೆ ನಡೆದಿದೆ.

ಕೊರಟಗೆರೆ ಪಟ್ಟಣದ 3ನೇ ವಾರ್ಡಿನ ಶ್ರೀನಿವಾಸ ಕಾಲೇಜಿನ ಹಿಂಭಾಗದ ಚಾಂದುಪಾಷ ಎಂಬಾತನ ಪತ್ನಿ ಹಥರತ್ ಭಾನು(32) ಕೊಲೆಯಾದವರು.

ಮೃತ ಹಥರತ್ ಭಾನು ಮತ್ತು ಮಗ ಮಹಮ್ಮದ್ ಅಲಿ ಮನೆಯಲ್ಲಿ ನಿದ್ರಿಸುತ್ತಿದ್ದಾಗ ಚಾಂದು ಪಾಷ, ದೊಣ್ಣೆಯಿಂದ ಇಬ್ಬರ ತಲೆಗೆ ಬಲವಾಗಿ ಹೊಡೆದು ಸಾಯಿಸುವ ಪ್ರಯತ್ನ ಮಾಡಿದ್ದಾನೆ.

ಹೊಡೆತದ ರಭಸಕ್ಕೆ ಹೆಂಡತಿ ಸ್ಥಳದಲ್ಲಿಯೇ ರಕ್ತಸ್ರಾವವಾಗಿ ಮೃತಪಟ್ಟರೇ ಮಗ ತುಮಕೂರು ಸರಕಾರಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ‌.

ಮೃತ ಮಹಿಳೆ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮದ್ಯದ ಅಮಲಿನಲ್ಲಿದ್ದ ಆರೋಪಿ ಚಾಂದುಪಾಷ ಕೊರಟಗೆರೆ ಪೊಲೀಸರ ವಶದಲ್ಲಿ ಇದ್ದಾನೆ.

ಸಿಪಿಐ ನಧಾಪ್ ಮತ್ತು ಪಿಎಸೈ ಮುತ್ತುರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.

Stay up to date on all the latest ರಾಜ್ಯ news
Poll
Narendra Singh Tomar

ಕೃಷಿ ಕಾನೂನು ಸಂಬಂಧ ರೈತರು ಮತ್ತು ಕೇಂದ್ರದ ನಡುವಣ ಬಿಕ್ಕಟ್ಟಿಗೆ ಹೊರಗಿನ ಶಕ್ತಿಗಳು ಕಾರಣ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಹೇಳಿದ್ದಾರೆ.


Result
ಹೌದು
ಇಲ್ಲ
flipboard facebook twitter whatsapp