ಕಾರವಾರ ಬಂದರಿನ ಎರಡನೇ ಹಂತದ ವಿಸ್ತರಣೆಗೆ ಹೈಕೋರ್ಟ್ ತಡೆ 

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ತೃಪ್ತಿದಾಯಕ ಒಪ್ಪಿಗೆ ನೀಡದ ಹೊರತು ಸುಸ್ಥಿರ ಅಭಿವೃದ್ಧಿಯ ಹೆಸರಿನಲ್ಲಿ ಕಾರವಾರ ವಾಣಿಜ್ಯ ಬಂದಿನ ಎರಡನೇ ಹಂತದ ಅಭಿವೃದ್ಧಿ ಕಾರ್ಯಗಳಿಗೆ ಅನುಮತಿ ನೀಡುವುದಿಲ್ಲ ಎಂದು ಹೈಕೋರ್ಟ್ ಗುರುವಾರ ಸ್ಪಷ್ಪಪಡಿಸಿದೆ. 
ಕಾರವಾರ ಬಂದರಿನಲ್ಲಿರುವ ಹಡಗಿನ ಚಿತ್ರ
ಕಾರವಾರ ಬಂದರಿನಲ್ಲಿರುವ ಹಡಗಿನ ಚಿತ್ರ

ಬೆಂಗಳೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ತೃಪ್ತಿದಾಯಕ ಒಪ್ಪಿಗೆ ನೀಡದ ಹೊರತು ಸುಸ್ಥಿರ ಅಭಿವೃದ್ಧಿಯ ಹೆಸರಿನಲ್ಲಿ ಕಾರವಾರ ವಾಣಿಜ್ಯ ಬಂದಿನ ಎರಡನೇ ಹಂತದ ಅಭಿವೃದ್ಧಿ ಕಾರ್ಯಗಳಿಗೆ ಅನುಮತಿ ನೀಡುವುದಿಲ್ಲ ಎಂದು ಹೈಕೋರ್ಟ್ ಗುರುವಾರ ಸ್ಪಷ್ಪಪಡಿಸಿದೆ. 

ಈ ಸಂಬಂಧ ಬೈತ್ಕೋಲ್ ಬಂಡಾರು ನಿರಾಶ್ರಿತರ ಯಾಂತ್ರಿಕೃತ ದೋಣಿ ಮಿನುಗಾರರ ಸಹಕಾರ ಸಂಘ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಾಧೀಶ ಎಸ್. ವಿಶ್ವನಾಥ್ ಶೆಟ್ಟಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಈ ಆದೇಶ ಪ್ರಕಟಿಸಿದೆ. 

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಒಪ್ಪಿಗೆ ದೊರೆಯದೆ ಅಭಿವೃದ್ಧಿ ಕಾರ್ಯಗಳಿಗೆ ಅವಕಾಶ ನೀಡಿದರೆ ಅದು ತನ್ನ ಕರ್ತವ್ಯದಲ್ಲಿ ವಿಫಲವಾಗಲಿದೆ ಎಂದು ವಿಭಾಗೀಯ ಪೀಠ ತಿಳಿಸಿದೆ. ಆದಾಗ್ಯೂ, ಗಾಳಿ ಮತ್ತು ನೀರು ( ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣ )  ಕಾಯ್ದೆಗಳ ನಿಬಂಧನೆಗಳಿಗೆ ಅನುಗುಣವಾಗಿ 2020 ರ ಜುಲೈ 1 ರಂದು ಕಾಮಗಾರಿ ಕೈಗೊಳ್ಳಲು ನೀಡಿದ ಒಪ್ಪಿಗೆಯನ್ನು ಪರಿಶೀಲಿಸಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮುಕ್ತವಾಗಿದೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಾಮರ್ಶೆ ಇಲ್ಲದೆ ಬಂದರಿನ ವಿಸ್ತರಣೆಗೆ ಅವಕಾಶ ಸಾಧ್ಯವಿಲ್ಲ ಎಂದಿರುವ ವಿಭಾಗೀಯ ಪೀಠ, ಮುಂದಿನ ವಿಚಾರಣೆಯನ್ನು ಡಿಸೆಂಬರ್ 1ಕ್ಕೆ ಮುಂದೂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com