ಸಂಪತ್ ರಾಜ್ ವಜಾಗೆ ಅಖಂಡ ಶ್ರೀನಿವಾಸ್ ಆಗ್ರಹ: ಆರೋಪಿಯಾದ ಮಾತ್ರಕ್ಕೆ ಶಿಸ್ತುಕ್ರಮ ಸಾಧ್ಯವಿಲ್ಲ ಎಂದ ಡಿಕೆಶಿ

ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಕೈವಾಡ ಇರುವುದು ಪೊಲೀಸ್ ತನಿಖೆಯಿಂದ ಬಯಲಾಗಿದ್ದು ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಪುಲಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

Published: 21st November 2020 01:27 PM  |   Last Updated: 21st November 2020 01:27 PM   |  A+A-


Akhanda Srinivas Murthy meets DK Shivakumar

ಅಖಂಡ ಶ್ರೀನಿವಾಸ್ ಮೂರ್ತಿ ಹಾಗೂ ಡಿಕೆ ಶಿವಕುಮಾರ್

Posted By : Manjula VN
Source : UNI

ಬೆಂಗಳೂರು: ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಕೈವಾಡ ಇರುವುದು ಪೊಲೀಸ್ ತನಿಖೆಯಿಂದ ಬಯಲಾಗಿದ್ದು ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಪುಲಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ, ತಮ್ಮ ಮನೆಗೆ ಬೆಂಕಿ ಹಚ್ಚಿರುವ ಸಂಪತ್ ರಾಜ್ ವಿರುದ್ಧ ಪಕ್ಷ ಕ್ರಮ ಕೈಗೊಳ್ಳಬೇಕು. ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅಖಂಡ ಶ್ರೀನಿವಾಸ್ ಮೂರ್ತಿ, ಅಧ್ಯಕ್ಷರಿಗೆ ಎಲ್ಲ ಬೆಳವಣಿಗೆಯ ಬಗ್ಗೆ ಮಾಹಿತಿ ನೀಡಿದ್ದೇನೆ. ಅವರು ಶಿಸ್ತು ಸಮಿತಿಗೆ ಪ್ರಕರಣವನ್ನು ನೀಡುವುದಾಗಿ ತಿಳಿಸಿದ್ದಾರೆ. ಶಿಸ್ತು ಸಮಿತಿ ವರದಿ ಬಂದ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ ಎಂದು ಹೇಳಿದರು.

ಅಖಂಡ ಶ್ರೀನಿವಾಸ್ ಮೂರ್ತಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಡಿಕೆ.ಶಿವಕುಮಾರ್ ಅವರು, ಡಿ.ಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಆರೋಪಿಯಾದ ಮಾತ್ರಕ್ಕೆ ಸಂಪತ್ ರಾಜ್ ಅವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 

ಶಾಸಕ ಅಖಂಡ ಶ್ರೀನಿವಾಸ್ ಇಂದು ತಮ್ಮನ್ನು ಭೇಟಿ ಯಾಗಿ ಮನವಿ ಮಾಡಿದ್ದಾರೆ.ಅವರ ಮನವಿಯನ್ನ ಆಲಿಸಿದ್ದೇನೆ. ಅವರಿಗೆ ಅನ್ಯಾಯ ಆಗಿರುವುದು ತಮಗೆ ತಿಳಿದಿದೆ. ಘಟನೆಯಿಂದ ತಮಗೂ ತುಂಬಾ ನೋವಾಗಿದೆ. ಶಾಸಕರು ಮಾಜಿ ಮೇಯರ್ ಸಂಪತ್ ರಾಜ್ ಮೇಲೂ ಅನುಮಾನ ವ್ಯಕ್ತಪಡಿಸಿದ್ದಾರೆ. ಅವರನ್ನು ಪಕ್ಷದಿಂದ ಉಚ್ಛಾಟಿಸುವಂತೆ ಮನವಿ ಪತ್ರ ಕೊಟ್ಟಿದ್ದಾರೆ. ಆದರೆ ಏಕಾಏಕಿ ಸಂಪತ್ ರಾಜ್ ವಿರುದ್ಧ ಕ್ರಮ ಕೈಗೊಳ್ಳುವುದು ಕಷ್ಟ. ನಮ್ಮಲ್ಲಿ ಪಕ್ಷದ ಶಿಸ್ತು ಸಮಿತಿಯಿದೆ. ಶಿಸ್ತು ಸಮಿತಿಯ ಮುಂದೆ ವಿಚಾರ ಪ್ರಸ್ತಾಪಿಸಿ ಕ್ರಮ ತೆಗೆದುಕೊಳ್ತೇವೆ ಎಂದು ಭರವಸೆ ನೀಡಿದರು.

ಯಾವುದೇ ಒಬ್ಬ ವ್ಯಕ್ತಿ ಆರೋಪಿಯಾದ ಮಾತ್ರಕ್ಕೆ ಆತನ ಮೇಲೆ ಕ್ರಮ ಜರುಗಿಸಲು ಆಗುವುದಿಲ್ಲ.ಡಿ.ಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿ ಗಲಭೆ ಪ್ರಕರಣದ ತನಿಖೆ ಇನ್ನು ನಡೆಯುತ್ತಿದೆ.ಸಂಪತ್ ರಾಜ್ ಅವರ ಮೇಲಿನ ಆರೋಪ ಸಾಬೀತುಪಡಿಸಲು ಸಾಕ್ಷ್ಯಾಧಾರಗಳನ್ನು ಒದಗಿಸಬೇಕಿದೆ. ಇದೆಲ್ಲವೂ ನ್ಯಾಯಾಲಯದಲ್ಲಿ ತೀರ್ಮಾನ ಆಗಬೇಕಿದೆ.ನಾಳೆ ಯಾರಾದರೂ ಏನಾದರೂ ಹೇಳಿಕೆ ಕೊಟ್ಟರೆ ಅದರ ಆಧಾರದ ಮೇಲೆ ಕ್ರಮ ಕೈಗೊಳ್ಳಲು ಸಾಧ್ಯವೇ?' ಎಂದರು.

Stay up to date on all the latest ರಾಜ್ಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp