ಮತ್ಸ್ಯ ಸಂಪದ ಯೋಜನೆಗೆ ಮುಖ್ಯಮಂತ್ರಿ ಚಾಲನೆ: ಆರ್ಡರ್ ಮಾಡಿದ 1 ಗಂಟೆಯೊಳಗೆ ಮನೆ ಬಾಗಿಲಿಗೆ ತಾಜಾ ಮೀನು

ವಿಶ್ವ ಮೀನುಗಾರಿಕಾ ದಿನಾಚರಣೆ ಅಂಗವಾಗಿ ವಿಧಾನಸೌಧದಲ್ಲಿಂದು ಏರ್ಪಡಿಸಿದ್ದ ಮತ್ಸ್ಯ ಸಂಪದ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದರು.
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ

ಬೆಂಗಳೂರು: ವಿಶ್ವ ಮೀನುಗಾರಿಕಾ ದಿನಾಚರಣೆ ಅಂಗವಾಗಿ ವಿಧಾನಸೌಧದಲ್ಲಿಂದು ಏರ್ಪಡಿಸಿದ್ದ ಮತ್ಸ್ಯ ಸಂಪದ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದರು.

ಮೀನುಗಾರಿಕಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಕುಮಾರ ಬಂಗಾರಪ್ಪ, ಶಾಸಕ ರಘುಪತಿ ಭಟ್ ಮತ್ತಿತರರು ಉಪಸ್ಥಿತರಿದ್ದರು.

ಇದೇ ವೇಳೆ ಮತ್ಸ್ಯಸಿರಿ, ಸಾಗರೋತ್ಪನ್ನ ಖಾದ್ಯಗಳ ಬಿಡುಗಡೆ ಮಾಡಿದ ಮುಖ್ಯಮಂತ್ರಿಯವರು, ಸುವರ್ಣ ತ್ರಿಭುಜ ಮೀನುಗಾರಿಕೆ ದೋಣಿ ಅವಘಡದಲ್ಲಿ ಮೃತರಾದ ಏಳು ಮೀನುಗಾರರ ಕುಟುಂಬಗಳಿಗೆ ತಲಾ 10 ಲಕ್ಷ ರೂ ಪರಿಹಾರ ವಿತರಿಸಿದರು.

ಮೀನುಗಾರಿಕೆಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಕೆ,ಸಾಲಮನ್ನಾ ಮೂಲಕ ಜೀವನ ಸುಧಾರಣೆ ಕ್ರಮ: ಮುಖ್ಯಮಂತ್ರಿ
ಕರ್ನಾಟಕ ರಾಜ್ಯವು 320 ಕಿ.ಮೀ. ಉದ್ದದ ಕರಾವಳಿ ತೀರ ಹಾಗೂ 8 ಸಾವಿರ ಹೆಕ್ಟೇರುಗಳಿಗೂ ಹೆಚ್ಚಿನ ಹಿನ್ನೀರು ಪ್ರದೇಶದೊಂದಿಗೆ ದೇಶದ ಮೀನುಗಾರಿಕಾ ವಲಯಕ್ಕೆ ಗಣನೀಯ ಕೊಡುಗೆ ನೀಡುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆಯ ಮೂಲಕ ಮೀನುಗಾರರ ಸುರಕ್ಷತೆ ಹಾಗೂ ಮೀನುಗಾ ರಿ ಕೆಯಲ್ಲಿ ಆದಾಯ ಹೆಚ್ಚಳ ಮಾಡುವುದು ನಮ್ಮ ಸರ್ಕಾರದ ಆದ್ಯತೆ ನೀಡಿದೆ ಎಂದು ಮುಖ್ಯಮಂತ್ರಿ ಯಡಿ ಯೂರಪ್ಪ ತಿಳಿಸಿದ್ದಾರೆ.

ವಿಧಾನ ಸೌಧದಲ್ಲಿಂದು ವಿಶ್ವ ಮೀನುಗಾರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶ್ರಮಜೀವಿಗಳಾದ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿಗಳನ್ನು ಉತ್ತಮಪಡಿಸಲು ಮೀನುಗಾರ ರಿಗಾಗಿ ಅನೇಕ ಕಲ್ಯಾಣ ಕಾರ್ಯಕ್ರಮಗಳನ್ನೂ ಸಹ ನಮ್ಮ ಸರ್ಕಾರವು ಅನುಷ್ಠಾನ ಗೊಳಿಸುತ್ತಿದೆ.ರಾಜ್ಯದಲ್ಲಿ ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಮೀನುಗಾರರ ಸುಮಾರು 60.00 ಕೋಟಿ ರೂ.ಗಳ ಸಾಲಮನ್ನಾ ಮಾಡಲಾಗಿದೆ.  

2020-21 ನೇ ಸಾಲಿನ ಆಯವ್ಯಯದಲ್ಲಿ ಮೀನುಗಾರಿಕೆ ಅಭಿವೃದ್ಧಿಗೆ ರೂ. 251.57 ಕೋಟಿಗ ಳನ್ನು ಒದಗಿಸಿ ಈ ಪೈಕಿ ಕೇಂದ್ರ ಪುರಸ್ಕೃತ ಯೋಜನೆಗಾಗಿ ಒಟ್ಟು ರೂ. 200 ಕೋಟಿಗಳ ವೆಚ್ಚದಲ್ಲಿ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅವಕಾಶ ಕಲ್ಪಿಸಿದೆ.ಕರಾವಳಿ ಯಾಂತ್ರೀಕೃತ ಮೀನುಗಾರಿಕೆ ಪ್ರೋತ್ಸಾ ಹಕ್ಕಾಗಿ ಪ್ರತಿ ವರ್ಷವು ಸುಮಾರು ರೂ. 135.00 ಕೋಟಿಗಳನ್ನು ಮೀನುಗಾರಿಕೆ ದೋಣಿಗಳು ಬಳಸುವ ಡೀಸೆ ಲ್‍ಗಾಗಿ ಸಹಾಯಧನವನ್ನಾಗಿ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ಇದೇ ವೇಳೆ ಮತ್ಸ್ಯಸಿರಿ, ಸಾಗರೋತ್ಪನ್ನ ಖಾದ್ಯಗಳ ಬಿಡುಗಡೆ ಮಾಡಿದ ಮುಖ್ಯಮಂತ್ರಿಯವರು, ಸುವರ್ಣ ತ್ರಿಭುಜ ಮೀನುಗಾರಿಕೆ ದೋಣಿ ಅವಘಡದಲ್ಲಿ ಮೃತರಾದ ಏಳು ಮೀನುಗಾರರ ಕುಟುಂಬಗಳಿಗೆ ತಲಾ 10 ಲಕ್ಷ ರೂ ಪರಿಹಾರ ವಿತರಿಸಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಕರ್ನಾಟಕ ರಾಜ್ಯವು 320 ಕಿ.ಮೀ. ಉದ್ದದ ಕರಾವಳಿ ತೀರ ಹಾಗೂ 8 ಸಾವಿರ ಹೆಕ್ಟೇರುಗಳಿಗೂ ಹೆಚ್ಚಿನ ಹಿನ್ನೀರು ಪ್ರದೇಶದೊಂದಿಗೆ ದೇಶದ ಮೀನುಗಾರಿಕಾ ವಲಯಕ್ಕೆ ಗಣನೀಯ ಕೊಡುಗೆ ನೀಡುತ್ತಿದೆ. 

ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆಯ ಮೂಲಕ ಮೀನುಗಾರರ ಸುರಕ್ಷತೆ ಹಾಗೂ ಮೀನುಗಾರಿಕೆಯಲ್ಲಿ ಆದಾಯ ಹೆಚ್ಚಳ ಮಾಡುವುದು ನಮ್ಮ ಸರ್ಕಾರದ ಆದ್ಯತೆ. ಶ್ರಮಜೀವಿಗಳಾದ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿಗಳನ್ನು ಉತ್ತಮಪಡಿಸಲು ಮೀನುಗಾರರಿಗಾಗಿ ಅನೇಕ ಕಲ್ಯಾಣ ಕಾರ್ಯಕ್ರಮಗಳನ್ನೂ ಸಹ ನಮ್ಮ ಸರ್ಕಾರವು ಅನುಷ್ಠಾನಗೊಳಿಸುತ್ತಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com