ಕೊರೋನಾ ಎಫೆಕ್ಟ್: ತುರ್ತು ಗರ್ಭನಿರೋಧಕ ಮಾತ್ರೆ ಸೇವನೆಯಲ್ಲಿ ಹೆಚ್ಚಳ; ಮಹಿಳೆಯರ ಆರೋಗ್ಯಕ್ಕೆ ಅಪಾಯ; ವೈದ್ಯರ ಎಚ್ಚರಿಕೆ

ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಗರ್ಭನಿರೋಧಕ ಮಾತ್ರೆಗಳನ್ನು ಹೆಚ್ಚಾಗಿ ಸೇವನೆ ಮಾಡುತ್ತಿರುವ ಅಡ್ಡ ಪರಿಣಾಮಗಳಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ವೈದ್ಯರು ಕಳವಳ ವ್ಯಕ್ತಪಡಿಸಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಗರ್ಭನಿರೋಧಕ ಮಾತ್ರೆಗಳನ್ನು ಹೆಚ್ಚಾಗಿ ಸೇವನೆ ಮಾಡುತ್ತಿರುವ ಅಡ್ಡ ಪರಿಣಾಮಗಳಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ವೈದ್ಯರು ಕಳವಳ ವ್ಯಕ್ತಪಡಿಸಿದ್ದಾರೆ. 

ತುರ್ತು ಗರ್ಭನಿರೋಧಕ ಮಾತ್ರೆಗಳನ್ನು ಹೆಚ್ಚಾಗಿ ಸೇವನೆ ಮಾಡಿದ ಪರಿಣಾಮ ಅಡ್ಡ ಪರಿಣಾಮಗಳನ್ನು ಎದುರಿಸುತ್ತಿದ್ದೇವೆಂದು ಹೇಳಿ ತಿಂಗಳಿಗೆ ಸುಮಾರು 10-15 ಮಹಿಳೆಯರು ಆಸ್ಪತ್ರೆಗೆ ಬರುತ್ತಿದ್ದಾರಂದು ನಗರದ ಫೋರ್ಟಿಸ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. 

ತುರ್ತು ಗರ್ಭನಿರೋಧಕ ಮಾತ್ರೆಗಳು ಹೆಚ್ಚಿನ ಡೋಸ್ ಹೊಂದಿರುತ್ತವೆ. ಇದರ ಪರಿಣಾಮ ಮಾತ್ರೆಗಳನ್ನು ಹೆಚ್ಚಾಗಿ ಸೇವನೆ ಮಾಡುವುದರಿಂದ ವಾಕರಿಕೆ, ವಾಂತಿ ಮತ್ತು ಅನಿಯಮಿತ ರಕ್ತಸ್ರಾವದಂತಹ ಅಡ್ಡಪರಿಣಾಮಗಳು ಎದುರಾಗುತ್ತವೆ. 

ಸಾಕಷ್ಟು ಮಹಿಳೆಯರು ಇಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮಾತ್ರೆಗಳನ್ನು ಹೆಚ್ಚಾಗಿ ಸೇವನೆ ಮಾಡುವುದರಿಂದ ಹಾರ್ಮೋನುಗಳ ಅಸಮತೋಲನ ಉಂಟಾಗುತ್ತದೆ ಎಂದು ಫೋರ್ಟಿಸ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ಸಲಹಾ ವೈದ್ಯೆ ಪರಿಮಳಾ ದೇವಿಯವರು ಹೇಳಿದ್ದಾರೆ. 

ಲಾಕ್‌ಡೌನ್ ಕಾರಣದಿಂದಾಗಿ ಮತ್ತು ಮನರಂಜನೆಗಳ ಕೊರತೆಯಿಂದಾಗಿ ದಂಪತಿಗಳು ಒಟ್ಟಿಗೆ ಮನೆಯಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಹೀಗಾಗಿ ಮಹಿಳೆಯರು ಆಗಾಗ್ಗೆ ತುರ್ತು ಗರ್ಭನಿರೋಧಕವನ್ನು ಮಾತ್ರೆಗಳನ್ನು ಸೇವನೆ ಮಾಡುತ್ತಿದ್ದಾರೆ. ಇಂತಹ ಸಂದರ್ಭಗಳಲ್ಲಿ ಕಾಂಡೋಮ್ಗಳ ಬಳಕೆ, ಕಾಪರ್-ಟಿಯಂತಹ ಶಾಶ್ವತ ವಿಧಾನಗಳನ್ನು ಬಳಸುವುದು ಉತ್ತಮವಾಗಿರುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. 

ಮಾತ್ರೆಗಳ ಬಳಕೆ ನಿಲ್ಲಿಸಿದ ಬಳಿಕವೂ ಶೇ.20-30ರಷ್ಟು ಮಹಿಳೆಯರು ಸಮಸ್ಯೆಗಳನ್ನು ಎದುರಿಸುತ್ತಿರುವುದು ಕಂಡು ಬಂದಿದೆ. ಗರ್ಭನಿರೋಧಕ ಮಾತ್ರೆಗಳನ್ನು ಹೆಚ್ಚಾಗಿ ಸೇವನೆ ಮಾಡಿ ಅಡ್ಡಪರಿಣಾಮಗಳನ್ನು ಎದುರುಸುತ್ತಿರುವ ಸಾಕಷ್ಟು ಪ್ರಕರಣಗಳನ್ನು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ನೋಡುತ್ತಿದ್ದೇವೆ. ಮಾತ್ರೆಗಳ ಪರಿಣಾಮ ಮಹಿಳೆಯರು ಋತುಚಕ್ರದಲ್ಲಿ ಸಮಸ್ಯೆ, ಭಾರೀ ರಕ್ತಸ್ರಾವದಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆಂದು ಆಸ್ಟರ್ ಸಿಎಂಐ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ವೈದ್ಯೆ ಡಾ.ಸೌಮ್ಯಾಲ್ಯಕ್ಷ್ಮಿ ಟಿ.ವಿ ಹೇಳಿದ್ದಾರೆ. 

ವಿನಾಯಕ ಆಸ್ಪತ್ರೆಯ ಸ್ತ್ರೀರೋಗತಜ್ಞ ಡಾ.ಶಕುಂತಲಾ ಎನ್ ಬಿ ಅವರು ಮಾತನಾಡಿ, ಇಂತಹ ಪ್ರಕರಣಗಳಲ್ಲಿ ಶೇ.10 ಏರಿಕೆ ಕಂಡಿದ್ದು, ಮಹಿಳೆಯರು ಅನಿಯಮಿತ ಋತುಚಕ್ರ, ರಕ್ತಸ್ರಾವ ಮತ್ತು ಹೊಟ್ಟೆ ನೋವಿನ ಸಮಸ್ಯೆ ಹೇಳಿಕೊಂಡು ಆಸ್ಪತ್ರೆಗೆ ಬರುತ್ತಿದ್ದಾರೆಂದು ತಿಳಿಸಿದ್ದಾರೆ. 

ಅತಿಯಾದ ಗರ್ಭನಿರೋಧಕ ಮಾತ್ರೆಗಳನ್ನು ತೆಗೆದುಕೊಂಡ ಬಳಿಕ ಅಪೂರ್ಣ ಗರ್ಭಪಾತವನ್ನು ಅನುಭವಿಸುತ್ತಿರುವ ಪ್ರಕರಣಗಳೂ ಕಂಡು ಬಂದಿದೆ. ಇಂತಹ ಸಂದರ್ಭದಲ್ಲಿ ಮಹಿಳೆಯರಲ್ಲಿ ಅನಿಯಮಿತ ರಕ್ತಸ್ರಾವ ಹಾಗೂ ಕಿಬ್ಬೊಟ್ಟೆಯಲ್ಲಿ ಅತೀವ್ರ ನೋವು ಕಾಣಿಸಿಕೊಳ್ಳಲು ಕಾಣಿಸಿಕೊಳ್ಳುತ್ತದೆ. ದಿನಿನಿತ್ಯದಲ್ಲಿ ಅಂದರೆ 21 ದಿನಗಳ ಮಟ್ಟಿಗೆ ತೆಗೆದುಕೊಳ್ಳುವ ಮಾತ್ರೆಗಳು ಅಷ್ಟಾಗಿ ಪರಿಣಾಮವನ್ನು ಹೊಂದಿರುವುದಿಲ್ಲ. ಆದರೆ, ತುರ್ತು ಗರ್ಭನಿರೋಧಕ ಮಾತ್ರೆಗಳು ಹೆಚ್ಚು ಪರಿಣಾಮಕಾರಿಯಾಗಿರುವುದರಿಂದ ಇದರಿಂದ ಹಾರ್ಮೋನ್'ಗಳ ಸಮಸ್ಯೆ ಸೇರಿದಂತೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com