ಕೊರೋನಾ ಲಸಿಕೆ ವಿಚಾರದಲ್ಲಿ ರಾಜಕೀಯ ಹೇಳಿಕೆಗಳನ್ನು ನಂಬಬೇಡಿ: ಡಾ. ಯತೀಂದ್ರ ಸಿದ್ದರಾಮಯ್ಯ

ಕೇಂದ್ರ ಸರ್ಕಾರ ಮತ್ತು ಡಬ್ಲ್ಯೂಎಚ್‌ಒ ಘೋಷಣೆ ಮಾಡುವವರೆಗೂ ಕೊರೋನಾ ಲಸಿಕೆ ವಿಚಾರದಲ್ಲಿ ಯಾವುದೇ ಔಷಧಿ ಕಂಪನಿಯ ಹೇಳಿಕೆಗಳನ್ನು ನಂಬಬಾರದು ಎಂದು  ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

Published: 21st November 2020 08:18 AM  |   Last Updated: 21st November 2020 12:48 PM   |  A+A-


Yathindra

ಯತೀಂದ್ರ

Posted By : Shilpa D
Source : The New Indian Express

ಮೈಸೂರು: ಕೇಂದ್ರ ಸರ್ಕಾರ ಮತ್ತು ಡಬ್ಲ್ಯೂಎಚ್‌ಒ ಘೋಷಣೆ ಮಾಡುವವರೆಗೂ ಕೊರೋನಾ ಲಸಿಕೆ ವಿಚಾರದಲ್ಲಿ ಯಾವುದೇ ಔಷಧಿ ಕಂಪನಿಯ ಹೇಳಿಕೆಗಳನ್ನು ನಂಬಬಾರದು ಎಂದು  ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಲಸಿಕೆ ಪ್ರಯೋಗದ ಹಂತದಲ್ಲಿದ್ದು  ಇಷ್ಟುಶೀಘ್ರದಲ್ಲಿ ಕಂಡು ಹಿಡಿಯುವುದು ಸವಾಲಿನ ಕೆಲಸವಾಗಿದೆ. ಹೀಗಾಗಿ ಲಸಿಕೆ ವಿಚಾರದಲ್ಲಿ ಪ್ರಚಾರ ಹಾಗೂ ರಾಜಕೀಯ ಹೇಳಿಕೆಗಳನ್ನ ನಂಬಬೇಡಿ. ಈಗಲೇ ಬರುತ್ತದೆ, ನಾಳೆ ಬರುತ್ತದೆ ಮುಂತಾದ ಭರವಸೆಗಳನ್ನು ನೀಡುವ ಮೂಲಕ ಮುಗ್ದ ಜನರನ್ನು ದಾರಿ ತಪ್ಪಿಸಲಾಗುತ್ತಿದೆ ಎಂದರು.

ಇದೇವೇಳೆ ಕಾಂಗ್ರೆಸ್‌ ಪಕ್ಷದ ನಾಯಕತ್ವದ ಬಗ್ಗೆ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಗೆ ಸಂಬಂಧಿಸಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯದ ಬಗ್ಗೆ ಮಾತನಾಡಿದ್ದಾರೆ ಅನ್ನಿಸುತ್ತಿಲ್ಲ. ಅವರು ಕೇಂದ್ರದ ವಿಚಾರ ಮಾತನಾಡಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದರು.

Stay up to date on all the latest ರಾಜ್ಯ news
Poll
RBI

ಕಾರ್ಪೊರೇಟ್‌ ಕಂಪನಿಗಳಿಗೆ ಬ್ಯಾಂಕ್‌ ಆರಂಭಿಸಲು ಅನುಮತಿಸುವಂತೆ ಕೇಂದ್ರ ಸರ್ಕಾರಕ್ಕೆ ಆರ್ ಬಿಐ ನೀಡಿರುವ ಸಲಹೆಯನ್ನು ಸ್ವಾಗತಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp