ನೀರಿನ ಟ್ಯಾಂಕ್ ನಲ್ಲಿ ಮುಳುಗಿ ಮಹಿಳೆ ಹಾಗೂ ಪುತ್ರಿಯರಿಬ್ಬರ ಸಾವು
ಸೊರಬ ತಾಲ್ಲೂಕಿನ ಹಿರೆಚೌಟಿ ಗ್ರಾಮದಲ್ಲಿ ಶುಕ್ರವಾರ ಸಂಜೆ ಬಟ್ಟೆ ಒಗೆಯುವಾಗ ಮಹಿಳೆ ಮತ್ತು ಆಕೆಯ ಇಬ್ಬರು ಹೆಣ್ಣುಮಕ್ಕಳು ನೀರಿನ ಟ್ಯಾಂಕ್ ನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
Published: 21st November 2020 01:30 PM | Last Updated: 21st November 2020 01:30 PM | A+A A-

ಸಂಗ್ರಹ ಚಿತ್ರ
ಶಿವಮೊಗ್ಗ: ಸೊರಬ ತಾಲ್ಲೂಕಿನ ಹಿರೆಚೌಟಿ ಗ್ರಾಮದಲ್ಲಿ ಶುಕ್ರವಾರ ಸಂಜೆ ಬಟ್ಟೆ ಒಗೆಯುವಾಗ ಮಹಿಳೆ ಮತ್ತು ಆಕೆಯ ಇಬ್ಬರು ಹೆಣ್ಣುಮಕ್ಕಳು ನೀರಿನ ಟ್ಯಾಂಕ್ ನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮೃತರನ್ನು ವಿದ್ಯಾ (32), ಅವರ ಪುತ್ರಿಯರಾದ ಕನ್ನಿಕಾ (6) ಮತ್ತು ನಯನಾ (3) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ತಾಯಿ ಹಾಗೂ ಪುತ್ರಿಯರಿಗಾಗಿ ಮೂರು ಗಂಟೆಗಳ ಕಾಲ ಹುಡುಕಿದ ನಂತರ ಗ್ರಾಮಸ್ಥರು ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿದ್ಯಾ ಅವರ ಕುಟುಂಬ ಸದಸ್ಯರು ಇದು ಕೊಲೆ ಎಂದು ಶಂಕಿಸಿದ್ದಾರೆ. ಅನವಟ್ಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಪ್ರಗತಿಯಲ್ಲಿದೆ.