ಬೌರಿಂಗ್ ಮತ್ತು ಲೇಡಿ ಕರ್ಜನ್ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಹೆಸರು ಬದಲಿಸಿದ ರಾಜ್ಯ ಸರ್ಕಾರ
ಬೆಂಗಳೂರಿನ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ಆರಂಭಿಸಲಾಗಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಹೆಸರನ್ನು ಬದಲಾಯಿಸಿ ಸರಕಾರ ಆದೇಶ ಹೊರಡಿಸಿದೆ.
Published: 22nd November 2020 01:54 PM | Last Updated: 22nd November 2020 01:54 PM | A+A A-

ಬೌರಿಂಗ್ ಆಸ್ಪತ್ರೆ
ಬೆಂಗಳೂರು: ಬೆಂಗಳೂರಿನ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ಆರಂಭಿಸಲಾಗಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಹೆಸರನ್ನು ಬದಲಾಯಿಸಿ ಸರಕಾರ ಆದೇಶ ಹೊರಡಿಸಿದೆ.
ಈ ಬಗ್ಗೆ ಸಚಿವ ಸುಧಾಕರ್ ಟ್ವೀಟ್ ಮಾಹಿತಿ ನೀಡಿದ್ದು, ನೂತನವಾಗಿ ಆರಂಭಿಸಲಾಗಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಹೆಸರನ್ನು ಬದಲಾಯಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.
ಅಲ್ಲದೆ ಟ್ವೀಟ್ ನೊಂದಿಗೆ ಸರ್ಕಾರದ ಆದೇಶ ಪ್ರತಿಯನ್ನೂ ಲಗತ್ತಿಸಿದ್ದಾರೆ.
ಬೆಂಗಳೂರಿನ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ಆರಂಭಿಸಲಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನ ಹೆಸರನ್ನು "ಶ್ರೀ ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ" ಎಂದು ಮರುನಾಮಕರಣ ಮಾಡಲಾಗಿದೆ.@CMofKarnataka @BSYBJP pic.twitter.com/UNOr9DblWK
— Dr Sudhakar K (@mla_sudhakar) November 21, 2020
Karnataka: Government Medical College and Research Centre built in the premises of Bowring and Lady Curzon Hospital in Bengaluru, renamed as Atal Bihari Vajpayee Medical College and Research Centre.
— ANI (@ANI) November 22, 2020