ಸರ್ಕಾರಕ್ಕೆ ತಿರುಗೇಟು; ಯಾವುದೇ ಕಾರಣಕ್ಕೂ ಬಂದ್ ಹತ್ತಿಕ್ಕಲು ಸಾಧ್ಯವಿಲ್ಲ: ಸಾ.ರಾ.ಗೋವಿಂದು

ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬಂದ್ ಅನ್ನು ಯಾವುದೇ ಕಾರಣಕ್ಕೂ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಕನ್ನಡ ಒಕ್ಕೂಟದ ಮುಖಂಡ ಮತ್ತು ಕನ್ನಡಪರ ಹೋರಾಟಗಾರ ಸಾರಾ ಗೋವಿಂದು ಹೇಳಿದ್ದಾರೆ,

Published: 22nd November 2020 05:21 PM  |   Last Updated: 22nd November 2020 05:21 PM   |  A+A-


Kannada Films Are not Stopped in Tamilnadu Says Sara Govindu

ಸಂಗ್ರಹ ಚಿತ್ರ

Posted By : Srinivasamurthy VN
Source : UNI

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬಂದ್ ಅನ್ನು ಯಾವುದೇ ಕಾರಣಕ್ಕೂ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಕನ್ನಡ ಒಕ್ಕೂಟದ ಮುಖಂಡ ಮತ್ತು ಕನ್ನಡಪರ ಹೋರಾಟಗಾರ ಸಾರಾ ಗೋವಿಂದು ಹೇಳಿದ್ದಾರೆ,

 ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಡಿ.5ರಂದು ಕನ್ನಡಪರ ಸಂಘಟನೆಗಳು ಕರೆನೀಡಿರುವ ಕರ್ನಾಟಕ ಬಂದ್‌ ಅನ್ನು ಯಾವುದೇ ಕಾರಣಕ್ಕೂ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಕನ್ನಡ ಒಕ್ಕೂಟದ ಮುಖಂಡ ಮತ್ತು ಕನ್ನಡಪರ ಹೋರಾಟಗಾರ ಸಾ.ರಾ.ಗೋವಿಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಾ.ರಾ.ಗೋವಿಂದ್, ಯಾವುದೇ ಕಠಿಣ ಕ್ರಮ, ಒತ್ತಡವಾದರೂ ಸರಿ ಬಂದ್ ಹತ್ತಿಕ್ಕಲು ಸಾಧ್ಯವಿಲ್ಲ. ಬಂದ್ ಗೆ ಈಗಾಗಲೇ ಹಲವರು ಬೆಂಬಲ ವ್ಯಕ್ತಪಡಿಸಿದ್ದು, ರಾಜ್ಯದ ಜನತೆಯೂ ಬೆಂಬಲಿಸುವಂತೆ ಮನವಿ ಮಾಡಿದರು. ನಾಳೆ ಕನ್ನಡದ ಒಕ್ಕೂಟದ  ವತಿಯಿಂದ ಬಳ್ಳಾರಿಯಲ್ಲಿ ಹೋರಾಟ ನಡೆಯಲಿದೆ. ಈ ಹೋರಾಟಕ್ಕೆ ಬೆಂಬಲ ನೀಡದವರು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ. ಆ ರೀತಿ ಆಗುವುದು ಬೇಡ.ನಾವು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಟ್ಟಾಗಿ ಹೋರಾಡುವ ಪ್ರಯತ್ನ ಮಾಡುತ್ತೇವೆ ಎಂದರು. 
 

Stay up to date on all the latest ರಾಜ್ಯ news
Poll
farmers-Protest

ದೆಹಲಿಯಲ್ಲಿ ಟ್ರಾಕ್ಟರ್ ಪೆರೇಡ್ ಸಮಯದಲ್ಲಿನ ಹಿಂಸಾಚಾರವು ರೈತರ ಆಂದೋಲನದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp