ಬೆಂಗಳೂರು: ಮಾಜಿ ಶಾಸಕ ರೋಷನ್ ಬೇಗ್ ನಿವಾಸದ ಮೇಲೆ ಸಿಬಿಐ ದಾಳಿ
ಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ತನಿಖೆ ಚುರುಕುಗೊಳಿಸಿದ್ದು , ರೋಷನ್ ಬೇಗ್ ಬಂಧನ ನಂತರ ಇದೀಗ ಬೆಳ್ಳಂಬೆಳಗ್ಗೆ ರೋಷನ್ ಬೇಗ್ ನಿವಾಸದ ಮೇಲೆ ಸಿಬಿಐ ದಾಳಿ ಮಾಡಿದೆ.
Published: 23rd November 2020 08:48 AM | Last Updated: 23rd November 2020 08:49 AM | A+A A-

ರೋಷನ್ ಬೇಗ್
ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ತನಿಖೆ ಚುರುಕುಗೊಳಿಸಿದ್ದು , ರೋಷನ್ ಬೇಗ್ ಬಂಧನ ನಂತರ ಇದೀಗ ಬೆಳ್ಳಂಬೆಳಗ್ಗೆ ರೋಷನ್ ಬೇಗ್ ನಿವಾಸದ ಮೇಲೆ ಸಿಬಿಐ ದಾಳಿ ಮಾಡಿದೆ.
ರೋಷನ್ ಬೇಗ್ ಬಂಧನದ ಬೆನ್ನಲ್ಲೇ ಸಿಬಿಐ 7 ಅಧಿಕಾರಿಗಳ ತಂಡ ಕೋಲ್ಸ್ ಪಾರ್ಕ್ ನಲ್ಲಿರುವ ರೋಷನ್ ಬೇಗ್ ನಿವಾಸದ ಮೇಲೆ ದಾಳಿ ಮಾಡಿ ಮಹತ್ವದ ದಾಖಲಾತಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಆರೋಪಿ ಮನ್ಸೂರ್ ಖಾನ್ನಿಂದ ಸುಮಾರು 200 ಕೋಟಿ ರೂ. ಗೂ ಹೆಚ್ಚು ಹಣ ರೋಷನ್ ಬೇಗ್ ಪಡೆದಿದ್ದಾರೆ ಎಂಬ ಗುರುತರ ಆರೋಪ ಎದುರಿಸುತ್ತಿದ್ದಾರೆ. ಇದರ ಜೊತೆಗೆ ಐಷಾರಾಮಿ ಕಾರುಗಳೂ ಸೇರಿದಂತೆ ಇನ್ನಿತರ ದುಬಾರಿ ಬೆಲೆಯ ಉಡುಗೊರೆಗಳನ್ನೂ ರೋಷನ್ ಬೇಗ್ ಪಡೆದಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ.