ಐಎಂಎ ಬಹುಕೋಟಿ ವಂಚನೆ: ಮತ್ತೋರ್ವ ಆರೋಪಿ, ಬಿಡಿಎ ಅಧಿಕಾರಿ ಸಿಬಿಐ ಬಲೆಗೆ 

ಐಎಂಎ ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಬಿಐ ಅಧಿಕಾರಿಗಳು ಸೋಮವಾರ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.

Published: 23rd November 2020 06:47 PM  |   Last Updated: 23rd November 2020 06:47 PM   |  A+A-


pd-kumar

ಪಿಡಿ ಕುಮಾರ್

Posted By : Lingaraj Badiger
Source : UNI

ಬೆಂಗಳೂರು: ಐಎಂಎ ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಬಿಐ ಅಧಿಕಾರಿಗಳು ಸೋಮವಾರ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಬಿಡಿಎ ವಿಶೇಷ ಭೂಸ್ವಾಧೀನಾಧಿಕಾರಿ ಪಿ.ಡಿ.ಕುಮಾರ್ ಬಂಧಿತ ಆರೋಪಿಯಾಗಿದ್ದು, ಈತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಮೊಹಮ್ಮದ್ ಮನ್ಸೂರ್​ ಖಾನ್ ಹಣ ರಿಯಲ್ ಎಸ್ಟೇಟ್​ ವಲಯದಲ್ಲಿ ಹೂಡಿಕೆಯಾಗಿದೆ. ಮನ್ಸೂರ್ ಖಾನ್ ನಿಂದ 3 ರಿಂದ 4 ಕೋಟಿ ರೂ. ಹಣವನ್ನು ಪಿ.ಡಿ. ಕುಮಾರ್ ಪಡೆದಿದ್ದರು ಎಂದು ಆರೋಪಿಸಿ ಕುಮಾರ್​ ವಿರುದ್ಧ ಸಿಬಿಐ ಅಧಿಕಾರಿಗಳು ಎಫ್ ಐಆರ್ ದಾಖಲಿಸಿದ್ದರು. 

ಪಿಡಿ ಕುಮಾರ್​ ಅವರನ್ನು ಬಂಧಿಸಿದ ಅಧಿಕಾರಿಗಳು, ಸಿಬಿಐ ವಿಶೇಷ ನ್ಯಾಯಾಲಯದ ಎದುರು ಹಾಜರುಪಡಿಸಿದ್ದರು. 
ನಂತರ ನ್ಯಾಯಾಲಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆಗಾಗಿ ಕುಮಾರ್​ ಅವರನ್ನು ಮೂರು ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿ ಆದೇಶಿಸಿದೆ.

Stay up to date on all the latest ರಾಜ್ಯ news
Poll
representation purpose only

ಕೋವಿಡ್ ಲಸಿಕೆ ವಿತರಿಸುವಲ್ಲಿ ಮೋದಿ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನೀವು ಏನಂತೀರಿ?


Result
ಇಲ್ಲ, ಇದು ಅಸಂಬದ್ಧ ಆರೋಪ
ಹೌದು, ಪಕ್ಷಪಾತ ಮಾಡುತ್ತಿದೆ
flipboard facebook twitter whatsapp