ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳು: ವಿಶೇಷ ನ್ಯಾಯಾಲಯ ಸ್ಥಾಪನೆಗೆ ಹೈಕೋರ್ಟ್ ಸೂಚನೆ
ಶಾಸಕರು, ಸಂಸದರ ವಿರುದ್ಧದ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ವಿಚಾರಣೆಗೆ ಒಳಪಡಿಸಲು ತಕ್ಷಣವೇ ಮತ್ತೊಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವ ನಿರ್ಧಾರ ಕೈಗೊಳ್ಳುವಂತೆ ಹೈಕೋರ್ಟ್ ಸೋಮವಾರ ಮೌಖಿಕವಾಗಿ ರಾಜ್ಯಸರ್ಕಾರಕ್ಕೆ ಸೂಚಿಸಿದೆ.
Published: 24th November 2020 12:44 PM | Last Updated: 24th November 2020 12:44 PM | A+A A-

ಹೈಕೋರ್ಟ್
ಬೆಂಗಳೂರು: ಶಾಸಕರು, ಸಂಸದರ ವಿರುದ್ಧದ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ವಿಚಾರಣೆಗೆ ಒಳಪಡಿಸಲು ತಕ್ಷಣವೇ ಮತ್ತೊಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವ ನಿರ್ಧಾರ ಕೈಗೊಳ್ಳುವಂತೆ ಹೈಕೋರ್ಟ್ ಸೋಮವಾರ ಮೌಖಿಕವಾಗಿ ರಾಜ್ಯಸರ್ಕಾರಕ್ಕೆ ಸೂಚಿಸಿದೆ.
ಬಾಕಿ ಇರುವ ಪ್ರಕರಣಗಳಿಗೆ ನೇಮಕಗೊಂಡ ಪ್ರಾಸಿಕ್ಯೂಟರ್‌ಗಳನ್ನು ದಾಖಲೆಯನ್ನು ವಿಶೇಷ ನ್ಯಾಯಾಲಯದ ಮುಂದೆ ಇಡುವಂತೆ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಒಕಾ ಮತ್ತು ನ್ಯಾಯಾಧೀಶ ಅಸೋಕ್ ಕಿನಾಗಿ ಅವರನ್ನೊಳಗೊಂಡ ವಿಭಾಗೀಯ ಪೀಠ, ರಾಜ್ಯಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಸುಪ್ರೀಂ ಕೋರ್ಟ್‌ನ ನಿರ್ದೇಶನಗಳ ಆಧಾರದ ಮೇಲೆ ಸುಯೋ ಮೋಟು ಪಿಐಎಲ್ ವಿಚಾರಣೆ ನಡೆಸಿದ ನ್ಯಾಯಪೀಠ, ಇದು ಸಾಕ್ಷಿಗಳ ಸಂರಕ್ಷಣಾ ಯೋಜನೆ 2018 ರ ಅನುಷ್ಠಾನವನ್ನು ಪರಿಸಬೇಕಾಗಿದೆ ಅಲ್ಲದೇ, ಮುಂದಿನ ವಿಚಾರಣೆ ಇರುವ ಡಿಸೆಂಬರ್ 1 ರಂದು ವಿಶೇಷ ನ್ಯಾಯಾಲಯದ ಮುಂದೆ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಬೇಕಾಗಿದೆ ಎಂದು ಹೇಳಿತು.
ಬಾಕಿ ಇರುವ ಪ್ರಕರಣಗಳ ಸಂಖ್ಯೆಯನ್ನು ಆಧರಿಸಿ ಶೀಘ್ರವಾಗಿ ವಿಲೇವಾರಿ ಮಾಡಲು ಇನ್ನೂ ಒಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವ ಕುರಿತು ಪರಿಶೀಲನೆ ನಡೆಸಬೇಕೆಂದು ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಗಳಿಗೆ ಸೂಚಿಸಿತ್ತು. ಈ ಸಂಬಂಧ ಕೂಡಲೇ ನಿರ್ಧಾರ ತೆಗೆದುಕೊಳ್ಳುವಂತೆ ಹೈಕೋರ್ಟ್ ರಾಜ್ಯ ಸರ್ಕಾರವನ್ನು ಕೋರಿದೆ.