ಒಕ್ಕಲಿಗ ಅಭಿವೃದ್ಧಿ ಮಂಡಳಿ ಸ್ಥಾಪಿಸಲೇಬೇಕು: ಡಿಸಿಎಂ ಅಶ್ವತ್ಥನಾರಾಯಣ 

ಒಕ್ಕಲಿಗ ಸಮುದಾಯದ ಅಪೇಕ್ಷೆಯ ಮೇರೆಗೆ ಸರ್ಕಾರ ‘ಒಕ್ಕಲಿಗ ಅಭಿವೃದ್ಧಿ ನಿಗಮ’ ರಚನೆ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
ಅಶ್ವತ್ಥ ನಾರಾಯಣ
ಅಶ್ವತ್ಥ ನಾರಾಯಣ

ತುಮಕೂರು: ಒಕ್ಕಲಿಗ ಸಮುದಾಯದ ಅಪೇಕ್ಷೆಯ ಮೇರೆಗೆ ಸರ್ಕಾರ ‘ಒಕ್ಕಲಿಗ ಅಭಿವೃದ್ಧಿ ನಿಗಮ’ ರಚನೆ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ತುಮಕೂರಿನಲ್ಲಿ ಆನ್ ಲೈನ್ ತರಗತಿಗಳನ್ನು ಪರಿಶೀಲಿಸಿದ ನಂತರ ಮಾತನಾಡಿದ ಅವರು, ಯಾವುದೇ ಒಂದು ಜಾತಿ, ಜನಾಂಗದ ಅಭಿವೃದ್ಧಿ ಕಾರಣಕ್ಕೆ ನಿಗಮ ರಚನೆ ಆಗುತ್ತದೆ. ಒಂದು ಜನಾಂಗಕ್ಕೆ ನಿಗಮ ರೂಪಿಸಿದಾಗ ಬೇರೆ ಸಮುದಾಯಗಳ ಜನರೂ ಬೇಡಿಕೆ ಸಲ್ಲಿಸುತ್ತಾರೆ. ಈ ವಿಚಾರದಲ್ಲಿ ಜನರ ಭಾವನೆಗಳಿಗೆ ಪೂರಕವಾಗಿ ಸರ್ಕಾರ ಕೆಲಸ ಮಾಡಬೇಕಾಗುತ್ತದೆ ಎಂದರು.

ಮರಾಠಿ ಭಾಷೆಗೆ ಮಂಡಳಿ ರಚನೆಯಾಗುತ್ತದೆ ಎಂದಾದರೇ ಒಕ್ಕಲಿಗರಿಗೂ ಅಭಿವೃದ್ಧಿ ಮಂಡಳಿ ರಚಿಸಲೇಬೇಕು ಎಂದು ಅವರು ಹೇಳಿದ್ದಾರೆ.

ಯಡಿಯೂರಪ್ಪ ಅವರ ಇತ್ತೀಚಿನ ದೆಹಲಿ ಪ್ರವಾಸದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗುವ ಕಾರ್ಯಕ್ರಮವೇ ನಿಗದಿ ಆಗಿರಲಿಲ್ಲ. ಹೀಗಿದ್ದಾಗ ಭೇಟಿಗೆ ಅಮಿತ್ ಶಾ ಅವಕಾಶ ನೀಡಲಿಲ್ಲ ಎಂದು ಕಾಂಗ್ರೆಸ್ ನಾಯಕರು ಇಲ್ಲಸಲ್ಲದ ಆರೋಪ ಮಾಡಬಾರದು. ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com