ರಾಜ್ಯದಲ್ಲಿ ಮತ್ತೊಂದು ದುರಂತ: ಬೀಗರ ಔತಣಕೂಟಕ್ಕೆ ಬಂದಿದ್ದ 5 ಯುವಕರು ಜಲಸಮಾಧಿ

ಈಜಲು ತೆರಳಿದ್ದ ಐವರು ನೀರು ಪಾಲಾಗಿರುವ ದುರ್ಘಟನೆ ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಬಳಿ ಸಂಭವಿಸಿದೆ.

Published: 25th November 2020 03:46 PM  |   Last Updated: 25th November 2020 04:11 PM   |  A+A-


Three kids Drown in jungli lake Shimoga

ಸಂಗ್ರಹ ಚಿತ್ರ

Posted By : Vishwanath S
Source : Online Desk

ಚಿಕ್ಕಮಗಳೂರು: ಈಜಲು ತೆರಳಿದ್ದ ಐವರು ನೀರು ಪಾಲಾಗಿರುವ ದುರ್ಘಟನೆ ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಬಳಿ ಸಂಭವಿಸಿದೆ.

ರಘು (22) , ದಿಲೀಪ್ (24), ಸಂದೀಪ್ (23) ,ದೀಪಕ್ (25), ಸುದೀಪ್ (22) ನೀರು ಪಾಲಾದವರು. 

ಬೀಗರ ಔತಣ ಕೂಟಕ್ಕೆ ಬಂದಿದ್ದ ಅವರು ಕೆರೆಯಲ್ಲಿ ಈಜಲು ತೆರಳಿದ್ದರು. ಆಗ  ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 

ವಿಷಯ ತಿಳಿಯುತ್ತಿದ್ದಂತೆ  ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ನೀರು ಪಾಲಾದವರಿಗಾಗಿ ಶೋಧ ಕಾರ್ಯ ಆರಂಭಿಸಿದೆ‌. ಘಟನೆಗೆ ಸಂಬಂಧಿಸಿದಂತೆ ಆಲ್ದೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿನ್ನೆ ಮೂಡುಬಿದಿರೆಗೆ ಮದುವೆಗೆಂದು ಬಂದಿದ್ದ ನಾಲ್ವರು ಈಜಲು ತೆರಳಿ ನೀರುಪಾಲದ ಘಟನೆ ಬೆನ್ನಲ್ಲೇ ಇದೀಗ ಚಿಕ್ಕಮಗಳೂರಿನಲ್ಲಿ ಐವರು ಯುವಕರು ಜಲಸಮಾಧಿಯಾಗಿದ್ದಾರೆ. 

Stay up to date on all the latest ರಾಜ್ಯ news
Poll
Covid-_Vaccine1

ರಾಜಕಾರಣಿಗಳಿಗೆ ಮೊದಲು ಕೋವಿಡ್-19 ಲಸಿಕೆ ನೀಡಬೇಕೇ?


Result
ಇಲ್ಲ, ಸಾಮಾನ್ಯ ಜನರಿಗೆ ಮೊದಲು
ಹೌದು, ಅವರು ನಮ್ಮ ನಾಯಕರು
flipboard facebook twitter whatsapp