ಪೊಲೀಸ್ ಅಧಿಕಾರಿಗಳಂತೆ ನಟಿಸಿ ಬ್ಲ್ಯಾಕ್‌ಮೇಲ್: ಮಂಗಳೂರಿನಲ್ಲಿ ಬೆಂಗಳೂರು ಮೂಲದ ಯುವಕರ ಬಂಧನ

ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿ ವ್ಯಕ್ತಿಯಿಂದ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಬೆಂಗಳೂರು ಮೂಲದ ಇಬ್ಬರು ಯುವಕರನ್ನು ಮಂಗಳೂರಿನಲ್ಲಿ ಬಂಧಿಸಿದ್ದಾರೆ.

Published: 25th November 2020 05:31 PM  |   Last Updated: 25th November 2020 05:51 PM   |  A+A-


ಬಂಧಿತ ಆರೋಪಿಗಳು

Posted By : Raghavendra Adiga
Source : Online Desk

ಮಂಗಳೂರು: ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿ ವ್ಯಕ್ತಿಯಿಂದ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಬೆಂಗಳೂರು ಮೂಲದ ಇಬ್ಬರು ಯುವಕರನ್ನು ಮಂಗಳೂರಿನಲ್ಲಿ ಬಂಧಿಸಿದ್ದಾರೆ.

ಬಂಧಿತರನ್ನು ಪವನ್ ಎಲ್ ಮತ್ತು ಗೋಕುಲ್ ರಾಜು ಎಂದು ಗುರುತಿಸಲಾಗಿದೆ, ಇಬ್ಬರೂ 20 ವರ್ಷದವರಾಗಿದ್ದಾರೆ.

ಸಾಕ್ಷಿ ರಾಜ್ ಎನ್ನುವ ಮಹಿಳೆಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆಯನ್ನು ರಚಿಸಿದ ಇವರಿಬ್ಬರು ಮಂಗಳೂರಿನ ಕೆಪಿಟಿ ನಿವಾಸಿ ರಾಜೇಶ್ ಎಂಬ ವ್ಯಕ್ತಿಯೊಂದಿಗೆ ಸ್ನೇಹ ಬೆಳೆಸಿ ನಂತರ ಮಹಿಳೆಯಂತೆ ಕರೆ ಮಾಡಿದ್ದಾರೆ, ಮಾತ್ರವಲ್ಲದೆ ರಾಜೇಶ್ ಗೆ ಮಹಿಳೆಯ ಅಶ್ಲೀಲ ಫೋಟೋಗಳನ್ನು ಕಳಿಸಿದ್ದಾರೆ. ಅದಕ್ಕೆ ಬದಲಾಗಿ ರಾಜೇಶ್ ಸಹ ನಗ್ನ ಚಿತ್ರಗಳನ್ನು ಕಳಿಸುವಂತೆ ಒತ್ತಾಯಿಸಿದ್ದಾರೆ.

ಒಮ್ಮೆ ರಾಜೇಶ್ ಫೋಟೋ ಕಳಿಸಿದ ನಂತರ ಅವರು ಹಣಕ್ಕಾಗಿ ಒತ್ತಾಯಿಸಲು ತೊಡಗಿದ್ದಾರೆ. ಅಲ್ಲದೆ ತಮ್ಮನ್ನು ತಾವು ಪೊಲೀಸ್ ಅಧಿಕಾರಿಗಳೆಂದು ಹೇಳಿಕೊಂಡ ಅವರು ರಾಜೇಶ್ ಗೆ ಬೆದರಿಕೆ ಹಾಕಲು ಸಹ ಮುಂದಾಗಿದ್ದಾರೆ. ಈ ಹಿನ್ನೆಲೆ ಅವರು ಹಲವಾರು ಬಾರಿ ರಾಜೇಶ್ ಗೆ ಕರೆ ಮಾಡಿದ್ದಾರೆ. 

ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅವರ ಮಾರ್ಗದರ್ಶನದಂತೆ ತಂಡವನ್ನು ಡಿಸಿಪಿ (ಅಪರಾಧ ಮತ್ತು ಸಂಚಾರ) ವಿನಯ್ ವಿ ಗೌಂಕರ್ ರಚಿಸಿದರು. ಸೈಬರ್ ಕ್ರೈಮ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಬಿ ಸಿ ಗಿರೀಶ್ ಮತ್ತು ಇ ಮತ್ತು ಎನ್‌ಸಿ ಪೊಲೀಸ್ ಠಾಣೆಯ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಬಂಧಿತರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 
 

Stay up to date on all the latest ರಾಜ್ಯ news
Poll
Narendra Singh Tomar

ಕೃಷಿ ಕಾನೂನು ಸಂಬಂಧ ರೈತರು ಮತ್ತು ಕೇಂದ್ರದ ನಡುವಣ ಬಿಕ್ಕಟ್ಟಿಗೆ ಹೊರಗಿನ ಶಕ್ತಿಗಳು ಕಾರಣ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಹೇಳಿದ್ದಾರೆ.


Result
ಹೌದು
ಇಲ್ಲ
flipboard facebook twitter whatsapp