ಐಎಂಎ ಹಗರಣ: ಪಿ.ಡಿ.ಕುಮಾರ್ ಗೆ ಷರತ್ತುಬದ್ಧ ಜಾಮೀನು

 ಐ ಮಾನಿಟರಿ ಅಡ್ವೈಸರಿ (ಐಎಂಎ) ಬಹುಕೋಟಿ ಹಗರಣದಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದ ಪಿಡಿ ಕುಮಾರ್ ಅಲಿಯಾಸ್ ಬಿಡಿಎ ಕುಮಾರ್ ಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.

Published: 25th November 2020 03:53 PM  |   Last Updated: 25th November 2020 04:13 PM   |  A+A-


Posted By : Raghavendra Adiga
Source : Online Desk

ಬೆಂಗಳೂರು: ಐ ಮಾನಿಟರಿ ಅಡ್ವೈಸರಿ (ಐಎಂಎ) ಬಹುಕೋಟಿ ಹಗರಣದಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದ ಪಿಡಿ ಕುಮಾರ್ ಅಲಿಯಾಸ್ ಬಿಡಿಎ ಕುಮಾರ್ ಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.

ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು 2 ಶ್ಯೂರಿಟಿ, 5 ಲಕ್ಷ ಬಾಂಡ್, ಸಾಕ್ಷ್ಯನಾಶ ಮಾಡದಂತೆ ಷರತ್ತಿನೊಂದಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಐಎಂಎ ಸ್ಥಾಪಕ ಮನ್ಸೂರ್ ಖಾನ್ ಬಳಿ 3-4 ಕೋಟಿ ಹಣ ಪಡೆದ ಆರೋಪ ಕುಮಾರ್ ಮೇಲಿದ್ದು ಅವರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿ ಬಂಧಿಸಿತ್ತು.
 

Stay up to date on all the latest ರಾಜ್ಯ news
Poll
Coronil tablets

ಕೋವಿಡ್-19 ವಿರುದ್ಧಪತಂಜಲಿಯ ಕೊರೋನಿಲ್ ಮಾತ್ರೆಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ನೀವು ಭಾವಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp