ಹಾಸನ: ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾಮೀಜಿ ಶವ ಪತ್ತೆ 

ಬಾಳೆಹೊನ್ನೂರು ಶಾಖಾ ಮಠದ ಸ್ವಾಮೀಜಿಯೋರ್ವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. 
ಶ್ರೀ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ
ಶ್ರೀ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ

ಹಾಸನ: ಬಾಳೆಹೊನ್ನೂರು ಶಾಖಾ ಮಠದ ಸ್ವಾಮೀಜಿಯೋರ್ವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. 

ಆಲೂರು ತಾಲೂಕಿನ ಕಾರ್ಜುವಳ್ಳಿ ಮಠದ ಶ್ರೀ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ(50) ಮೃತಪಟ್ಟವರು. 

ಮಂಗಳವಾರ ರಾತ್ರಿ ತಮ್ಮ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬುಧವಾರ ಬೆಳಗ್ಗೆ ಕೋಣೆಯತ್ತ ತೆರಳಿದ ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ  ಆಲೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ತನಿಖೆ ಕೈಗೊಂಡಿದ್ದಾರೆ. ಶ್ರೀಗಳ ನಿಧನ ಸುದ್ದಿಯಿಂದ ಭಕ್ತರು ಆತಂಕಕ್ಕೀಡಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com