ಸಂವಿಧಾನ ದಿನ: ಅಂಬೇಡ್ಕರ್ ಗೆ ಡಿಸಿಎಂ ಗೌರವ ನಮನ
ದೇಶಾದ್ಯಂತ ಇಂದು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ . ಸಂವಿಧಾನ ದಿನದ ನಿಮಿತ್ತ ಉಪ ಮುಖ್ಯಮಂತ್ರಿ ಡಾ.ಸಿಎನ್ ಅಶ್ವತ್ಥನಾರಾಯಣ ಸಂವಿಧಾನ ಶಿಲ್ಪಿ ಡಾ.ಬಿ.ಆ.ರ್. ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದರು.
Published: 26th November 2020 10:41 AM | Last Updated: 26th November 2020 10:41 AM | A+A A-

ಡಾ.ಸಿಎನ್ ಅಶ್ವತ್ಥನಾರಾಯಣ
ಬೆಂಗಳೂರು: ದೇಶಾದ್ಯಂತ ಇಂದು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ. ಸಂವಿಧಾನ ದಿನದ ನಿಮಿತ್ತ ಉಪ ಮುಖ್ಯಮಂತ್ರಿ ಡಾ.ಸಿಎನ್ ಅಶ್ವತ್ಥನಾರಾಯಣ ಸಂವಿಧಾನ ಶಿಲ್ಪಿ ಡಾ.ಬಿ.ಆ.ರ್. ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದರು.
ಯಶವಂತಪುರ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ, ನಂತರ ಅವರು ದೇಶಕ್ಕೆ ಕೊಟ್ಟ ಕೊಡುಗೆ ಬಗ್ಗೆ ಗುಣಗಾನ ಮಾಡಿದರು.
ಅಂಬೇಡ್ಕರ್ ಅವರು ಮಹಾಜ್ಞಾನಿಯಾಗಿದ್ದು, ಅವರ ದೂರದೃಷ್ಟಿಯ ಫಲವಾಗಿ ಜಗತ್ತಿನ ಸರ್ವಶ್ರೇಷ್ಠ ಸಂವಿಧಾನ ನಮ್ಮ ಮುಂದಿದೆ. ಇಂಥ ಸಂವಿಧಾನ ರಚನೆಯು ಬಾಬಾಸಾಹೇಬರ ನೇತೃತ್ವದಲ್ಲಿ ನಡೆದಿದೆ. ಈ ಕಾರಣಕ್ಕಾಗಿ ದೇಶ ಅವರನ್ನು ಇಂದು ಸ್ಮರಿಸುತ್ತಿದೆ ಎಂದೂ ಉಪ ಮುಖ್ಯಮಂತ್ರಿ ಹೇಳಿದರು. ಈ ಸಂದರ್ಭದಲ್ಲಿ ಅನೇಕ ಸ್ಥಳೀಯ ಮುಖಂಡರು ಹಾಜರಿದ್ದರು.