ಮಾಗಡಿ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉಪ ಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ ಚಾಲನೆ

ಮಾಗಡಿ ತಾಲೂಕಿನ ವಿವಿಧೆಡೆ ಇಂದು ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ ನಾರಾಯಣ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ.

Published: 26th November 2020 04:23 PM  |   Last Updated: 26th November 2020 04:28 PM   |  A+A-


DrAshwathnarayana1

ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ ನಾರಾಯಣ್ , ಶಾಸಕ ಮಂಜುನಾಥ್ ಮತ್ತಿತರರು

Posted By : Nagaraja AB
Source : Online Desk

ರಾಮನಗರ: ಮಾಗಡಿ ತಾಲೂಕಿನ ವಿವಿಧೆಡೆ ಇಂದು ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ ನಾರಾಯಣ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ.

ಆಗಲಕೋಟೆ ಗ್ರಾಮ ಪಂಚಾಯಿತಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದ ಸಚಿವರು, ಹೇಳಿಗೆಹಳ್ಳಿ ಕಾಲೋನಿಯ ನಿವೇಶನಗಳ ಹಕ್ಕುಪತ್ರ ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ಶಾಸಕ ಮಂಜುನಾಥ್, ರಾಮನಗರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಹೆಚ್. ಎನ್. ಅಶೋಕ್ ಮತ್ತಿತರರು ಉಪಸ್ಥಿತರಿದ್ದರು. 

ಮೇಲನಹಳ್ಳಿ ಗ್ರಾಮದಲ್ಲಿ 415 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ  ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದ  ಸಚಿವರು, ಈ ಸಂಸ್ಥೆಯ ಮೂಲಕ ಸ್ಥಳೀಯ ಯುವಜನತೆಗೆ ಉತ್ತಮ ಗುಣಮಟ್ಟದ ಕೌಶಲ್ಯ ತರಬೇತಿ ದೊರಕಲಿದೆ ಎಂದಿದ್ದಾರೆ.

ಮಾಡಬಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ  ಜೇನುಕಲ್ಲುಪಾಳ್ಯದಲ್ಲಿ ಪರಿಶಿಷ್ಟ ಪಂಗಡದ ನಾಗರಿಕರಿಗೆ ವಾಸಸ್ಥಳದ ಜಮೀನಿನ ಹಕ್ಕುಪತ್ರ ವಿತರಿಸಿದರು. ಒಟ್ಟು 54 ಜನರಿಗೆ ಇದನ್ನು ವಿತರಿಸಲಾಗಿದ್ದು, ಇವರ ಬದುಕಿನ ಸುಧಾರಣೆ ಹಾಗೂ ಅಭಿವೃದ್ಧಿಯ ನಿಟ್ಟಿನಲ್ಲಿ ಇದು ಪೂರಕವಾಗಲಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

 

Stay up to date on all the latest ರಾಜ್ಯ news
Poll
Farmers_ride_tractors1

ರೈತರು ದೆಹಲಿಯಲ್ಲಿ ತಮ್ಮ ಗಣರಾಜ್ಯೋತ್ಸವ ದಿನದ ಟ್ರಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಕೇ?


Result
ಹೌದು
ಬೇಡ
flipboard facebook twitter whatsapp