ಬಿಬಿಎಂಪಿ ಚುನಾವಣೆ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್ 

ಬಿಬಿಎಂಪಿ ಪಾಲಿಕೆಗೆ ಶೀಘ್ರ ಚುನಾವಣೆ ನಡೆಸಲು ಆದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು; ಬಿಬಿಎಂಪಿ ಪಾಲಿಕೆಗೆ ಶೀಘ್ರ ಚುನಾವಣೆ ನಡೆಸಲು ಆದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. 

ಕಾಂಗ್ರೆಸ್ ಪಕ್ಷದ ಪಾಲಿಕೆಯ ಮಾಜಿ ಸದಸ್ಯ ಎಂ.ಶಿವರಾಜು ಮತ್ತಿತರರ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಸಂಬಂಧ ಅರ್ಜಿದಾರ ಮತ್ತು ಸರ್ಕಾರದ ಪರ ವಕೀಲರ ವಾದ-ಪ್ರತಿವಾದ ಆಲಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ತೀರ್ಪು ಕಾಯ್ದಿರಿಸಿತು. ಸರ್ಕಾರದ ಪರ ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ.ನಾವದಗಿ, ಸರ್ಕಾರಕ್ಕೆ ಚುನಾವಣೆ ಮುಂದೂಡುವ ಯಾವುದೇ ಉದ್ದೇಶವಿಲ್ಲ. ಬಿಬಿಎಂಪಿ ವಿಸ್ತಾರವಾಗಿ ಬೆಳೆದಿದೆ.
 
ಹೀಗಾಗಿ ಬಿಬಿಎಂಪಿಯ ವಾರ್ಡ್'ಗಳ ಮರುವಿಂಗಡಣೆ ಮಾಡುವ ಆಗತ್ಯವಿದೆ. ಆ ಕಾರ್ಯ ಪೂರ್ಣಗೊಳಿಸಿ ಚುನಾವಣೆ ನಡೆಸಲಾಗುವುದು ಎಂದು ತಿಳಿಸಿದರು. 

ಅರ್ಜಿದಾರರ ಪರ ವಕೀಲರು, ಚುನಾವಣೆ ಮುಂದೂಡುವ ಅಧಿಕಾರ ಸರ್ಕಾರಕ್ಕೆ ಇಲ್ಲ. ಚುನಾಯಿತ ಅವಧಿಗೆ ಮುನ್ನ ಚುನಾವಣೆ ನಡೆಸುವುದು ಚುನಾವಣಾ ಆಯೋಗದ ಸಾಂವಿಧಾನಿಕ ಕರ್ತವ್ಯ. ಈ ವಿಚಾರದಲ್ಲಿ ಸರ್ಕಾರಕ್ಕೆ ಯಾವುದೇ ಪಾತ್ರವಿಲ್ಲ. ಚುನಾವಣೆ ನಡೆಸುವಂತೆ ಆಯೋಗಕ್ಕೆ ಆದೇಶಿಸಬೇಕು ಎಂದು ಕೋರಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com