ಮಂಗಳೂರಿನಲ್ಲಿ ರೌಡಿಶೀಟರ್ ಮೃತದೇಹ ಪತ್ತೆ

ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿ ಎಸೆದ ಸ್ಥಿತಿಯಲ್ಲಿ ಬೊಕ್ಕಪಟ್ಣದ ರೌಡಿ ಶೀಟರ್ ಇಂದ್ರಜಿತ್ (45) ಶವ ಪತ್ತೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮಂಗಳೂರು: ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿ ಎಸೆದ ಸ್ಥಿತಿಯಲ್ಲಿ ಬೊಕ್ಕಪಟ್ಣದ ರೌಡಿ ಶೀಟರ್ ಇಂದ್ರಜಿತ್ (45) ಶವ ಪತ್ತೆಯಾಗಿದೆ.

ಗುರುವಾರ ನಸುಕಿನ ಜಾವ ನಗರದ ಕುದ್ರೋಳಿ ಸಮೀಪದ ಕರ್ನಲ್ ಗಾರ್ಡನ್ ಬಳಿ ರೌಡಿಶೀಟರ್ ಮೃತದೇಹ ಪತ್ತೆಯಾಗಿದೆ.

ಕೊಲೆಯಾದ ಇಂದ್ರಜೀತ್ ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ರೌಡಿಶೀಟರ್ ಆಗಿದ್ದ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಗಾರ್ಡನ್ ಬಳಿ ಎಸೆಯಲಾಗಿದ್ದು, ಬುಧವಾರ ತಡರಾತ್ರಿಯಿಂದ ಗುರುವಾರ ನಸುಕಿನಲ್ಲಿ ದುಷ್ಕರ್ಮಿಗಳು ಹತ್ಯೆಗೈದಿರಬಹುದು ಎಂದೂ ಶಂಕಿಸಲಾಗಿದೆ. ಇಂದು ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ.

ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com