ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ವಿವಾಹಕ್ಕೆ ಗಣ್ಯರ ದಂಡು: ಸೋನಿಯಾ, ರಾಹುಲ್ ಗಾಂಧಿ ಭಾಗಿ ಸಾಧ್ಯತೆ

ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಮತ್ತು ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ ಅವರ ಸಹೋದರ ಬಿ.ಕೆ. ಶಿವಕುಮಾರ್‌ ಪುತ್ರಿ ಡಾ.ಹಿತಾ ಅವರ ವಿವಾಹ ಗೋವಾದ ಲೀಲಾ ಪ್ಯಾಲೇಸ್‌ ಹೋಟೆಲ್‌ನಲ್ಲಿ ನ. 27ರಂದು ಅದ್ಧೂರಿಯಾಗಿ ನಡೆಯಲಿದೆ.

Published: 26th November 2020 08:26 AM  |   Last Updated: 26th November 2020 12:36 PM   |  A+A-


Laxmi Hebbalkar and family at her son’s mehendi ceremony in Goa

ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ವಿವಾಹ ಸಮಾರಂಭ

Posted By : Shilpa D
Source : The New Indian Express

ಬೆಳಗಾವಿ: ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಮತ್ತು ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ ಅವರ ಸಹೋದರ ಬಿ.ಕೆ. ಶಿವಕುಮಾರ್‌ ಪುತ್ರಿ ಡಾ.ಹಿತಾ ಅವರ ವಿವಾಹ ಗೋವಾದ ಲೀಲಾ ಪ್ಯಾಲೇಸ್‌ ಹೋಟೆಲ್‌ನಲ್ಲಿ ನ. 27ರಂದು ಅದ್ಧೂರಿಯಾಗಿ ನಡೆಯಲಿದೆ.

ಕಾಕತಾಳೀಯ ಎಂಬಂತೆ ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಕೂಡ ಗೋವಾದಲ್ಲಿಯೇ ಸದ್ಯ ವಾಸ್ತವ್ಯ ಹೂಡಿದ್ದು  ಶುಕ್ರವಾರ ನಡೆಯುವ ಆರತಕ್ಷತೆಯಲ್ಲಿ ಪಾಲ್ಗೋಳ್ಳುವ ಸಾಧ್ಯತೆಯಿದೆ.

ಸೋನಿಯಾ ಮತ್ತು ರಾಹುಲ್ ಗಾಂಧಿ ಅವರನ್ನು ವಿವಾಹಕ್ಕೆ ಆಮಂತ್ರಿಸಲಾಗಿದೆ. ರೆಸಾರ್ಟ್ ನಲ್ಲಿ ಉತ್ತಮ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಮೋಹನ್ ರೆಡ್ಡಿ ತಿಳಿಸಿದ್ದಾರೆ.

ಇನ್ನೂ ಮೃಣಾಲ್ ಮತ್ತು ಡಾ.ಹಿತ ಅವರ ವಿವಾಹ ಆರತಕ್ಷತೆಗೆ ಕೊರೋನಾ ಕಾರಣದಿಂದ ಕೇವಲ 500 ಗಣ್ಯರಿಗೆ  ಮಾತ್ರ ಆಹ್ವಾನ ನೀಡಲಾಗಿದೆ, ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷದ ಶಾಸಕರು ಮತ್ತು ಕನ್ನಡ ಸಿನಿಮಾ ಕಲಾವಿದರು ಪಾಲ್ಗೋಳ್ಳಲಿದ್ದಾರೆ.

ವಿವಿಧ ಪಕ್ಷಗಳ ಪ್ರಮುಖ ರಾಜಕಾರಣಿಗಳು ಈಗಾಗಲೇ ಗೋವಾದಲ್ಲಿ ಬೀಡು ಬಿಟ್ಟಿದ್ದಾರೆ. ಒಂದು ವೇಳೆ ಸೋನಿಯಾ ಮತ್ತು ರಾಹುಲ್ ಆರತಕ್ಷತೆಗೆ ಆಗಮಿಸಿದರೇ ಅದು ತಮ್ಮಅದೃಷ್ಟ ಎಂದು ಮೋಹನ್ ರೆಡ್ಡಿ ತಿಳಿಸಿದ್ದಾರೆ.

ದೆಹಲಿಯಲ್ಲಿ ಮಾಲಿನ್ಯ ಪ್ರಮಾಣ ಹೆಚ್ಚಿರುವ ಕಾರಣ ವೈದ್ಯರ ಸಲಹೆ ಮೇರೆಗೆ ಸೋನಿಯಾ ಗಾಂಧಿ ಅವರು ಗೋವಾಗೆ ಶಿಫ್ಟ್ ಆಗಿದ್ದಾರೆ. ಇನ್ನೂ ಕೆಲ ಕಾಲ ಅವರು ಗೋವಾದಲ್ಲಿಯೇ ಉಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ,  

ಕಳೆದ ಶುಕ್ರವಾರ ಡಾಬೋಲಿನ್ ಅಂತರಾಷ್ಟ್ರೀ ವಿಮಾನ ನಿಲ್ದಾಣದಿಂದ ದಿ ಲೀಲಾ ಹೋಟೆಲ್ ಗೆ ಬಂದಿಳಿದಿದ್ದಾರೆ. ಇನ್ನೂ ಕೆಲವು ದಿನಗಳವರೆಗೆ ಸೋನಿಯಾ ಗೋವಾದಲ್ಲಿಯೇ ಉಳಿಯಲಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸಂಬಂಧಿಗಳು ಮಂಗಳವಾರವೇ ಗೋವಾಗೆ ಬಂದಿದ್ದು ಕಾರ್ಯಕ್ರಮಕ್ಕಾಗಿ ಸಿದ್ಧತೆ ನಡೆಸುತ್ತಿದ್ದಾರೆ. ಮದುವೆ ಸಂಬಂಧಿತ ಸಂಪ್ರದಾಯಗಳು ಬುಧವಾರ ಬೆಳಗ್ಗೆಯಿಂದ ಆರಂಭವಾಗಿದ್ದು,  ಶುಕ್ರವಾರ ಪೂರ್ಣಗೊಳ್ಳಲಿದೆ ಎಂದು ಮೋಹನ್ ರೆಡ್ಡಿ ತಿಳಿಸಿದ್ದಾರೆ. ಶುಕ್ರವಾರ ಸಂಜೆ ಆರತಕ್ಷತೆ ನಡೆಯಲಿದ್ದು, ಭದ್ರಾವತಿಯಲ್ಲಿ ಎರಡು ಕುಟುಂಬಸ್ಥರು ಅದ್ದೂರಿ ನಿಶ್ಚಿತಾರ್ಥ ನಡೆಸಿದ್ದರು.
 

Stay up to date on all the latest ರಾಜ್ಯ news
Poll
Narendra Singh Tomar

ಕೃಷಿ ಕಾನೂನು ಸಂಬಂಧ ರೈತರು ಮತ್ತು ಕೇಂದ್ರದ ನಡುವಣ ಬಿಕ್ಕಟ್ಟಿಗೆ ಹೊರಗಿನ ಶಕ್ತಿಗಳು ಕಾರಣ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಹೇಳಿದ್ದಾರೆ.


Result
ಹೌದು
ಇಲ್ಲ
flipboard facebook twitter whatsapp