ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳಿಗೆ ಶೀಘ್ರದಲ್ಲೇ 3 ಕೋಟಿ ರೂ. ಬಿಡುಗಡೆ: ಸಂಸದರಿಗೆ ಸಿಎಂ ಯಡಿಯೂರಪ್ಪ ಭರವಸೆ

ತಮ್ಮ ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳ ಕೈಗೊಳ್ಳಲು ರಾಜ್ಯ ಸರ್ಕಾರ ರೂ.3 ಕೋಟಿ ಬಿಡುಗಡೆ ಮಾಡಬೇಕೆಂಬ ಸಂಸದರ ಮನವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದನೆ ನೀಡಿದ್ದು, ಶೀಘ್ರಗತಿಯಲ್ಲಿ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. 
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ

ಬೆಂಗಳೂರು: ತಮ್ಮ ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳ ಕೈಗೊಳ್ಳಲು ರಾಜ್ಯ ಸರ್ಕಾರ ರೂ.3 ಕೋಟಿ ಬಿಡುಗಡೆ ಮಾಡಬೇಕೆಂಬ ಸಂಸದರ ಮನವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದನೆ ನೀಡಿದ್ದು, ಶೀಘ್ರಗತಿಯಲ್ಲಿ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. 

ರಾಜ್ಯದ ಸಂಸದರೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ಅವರು ಸಭೆ ನಡೆಸಿದ ಸಂದರ್ಭದಲ್ಲಿ ಸಭೆಯಲ್ಲಿ ಪಾಲ್ಗೊಂಡಿದ್ದ ಹಲವು ಸಂಸದರು ಸಲಹೆ ಹಾಗೂ ಮನವಿಗಳನ್ನು ಮಾಡಿಕೊಂಡರು. 

ರಾಜ್ಯದಲ್ಲಿ ಈ ಬಾರಿ ಮೆಕ್ಕೆ ಜೋಳ ಮತ್ತು ಭತ್ತದ ಇಳುವರಿ ಹೆಚ್ಚಾಗಿದೆ. ಬೆಲೆ ಕುಸಿತ ತಡೆಯಲು ಮಾರುಕಟ್ಟೆಮಧ್ಯಪ್ರವೇಶ ಮಾಡಿ ಬೆಂಬಲ ಬೆಲೆ ನೀಡಬೇಕು. ಸಂಸದರ ನಿಧಿ ಅಡಿಯಲ್ಲಿ ಒಬ್ಬ ಸಂಸದರಿಗೆ ಕನಿಷ್ಠ 3 ಕೋಟಿ ರು. ಸಂಸದರ ಸ್ಥಳೀಯ ಅಭಿವೃದ್ಧಿ ನಿಧಿಯನ್ನು ಒದಗಿಸಬೇಕು. ಕಲಬುರಗಿ ಇಎಸ್‌ಐ ಆಸ್ಪತ್ರೆಯ ಉನ್ನತೀಕರಣಕ್ಕೆ 860 ಎಕರೆ ಜಮೀನು ಲಭ್ಯವಿದೆ. 150 ಎಕೆರೆ ಪ್ರದೇಶದಲ್ಲಿ ಪ್ರಯೋಗಾಲಯ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ರಾಜ್ಯ ಸರ್ಕಾರ ಅಗತ್ಯ ಅನುಮತಿಗಳನ್ನು ನೀಡಬೇಕು. ಕೂಡ್ಲಿಗಿ ಮತ್ತು ಸಂಡೂರು ತಾಲ್ಲೂಕುಗಳ ಕೆರೆಗಳಿಗೆ ತುಂಗಭದ್ರಾ ಜಲಾಶಯದಿಂದ ನೀರು ತುಂಬಿಸಬೇಕು ಎಂದು ಮನವಿ ಮಾಡಿಕೊಂಡರು. 

ಸಂಸದರ ನಿಧಿಯಲ್ಲಿ ಹಣವಿಲ್ಲ. ಹೀಗಾಗಿ ಪ್ರತೀ ಲೋಕಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗಾಗಿ ರೂ.3 ಕೋಟಿ ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡೆವು. ಈ ವೇಳೆ ಮುಖ್ಯಮಂತ್ರಿಗಳು ಮುಂದಿನ ರಾಜ್ಯ ಬಜೆಟ್ ನಲ್ಲಿ ಇದಕ್ಕೆ ಆದ್ಯತೆ ನೀಡುವುದಾಗಿ ಭರವಸೆ ನೀಡಿದ್ದಾರೆಂದು ಸಂಸದ ಪ್ರತಾಪ್ ಸಿಂಹ ಅವರು ಹೇಳಿದ್ದಾರೆ. 

ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು. ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಹಲವು ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೆ ತರಲು ಸಂಸದರು ಸಹಕಾರ ನೀಡುವಂತೆ ಕೇಳಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. 

ಪ್ರತೀ ಬಾರಿ ಯಾವುದೇ ಯೋಜನೆ ಅಥವಾ ನಿಧಿ ಬಿಡುಗಡೆಯಾದಾಗ ಸಚಿವರು ದೆಹಲಿಗೆ ಭೇಟಿ ನೀಡುತ್ತಿದ್ದಾರೆ. ಅಧಿಕಾರಿಗಳನ್ನು ಭೇಟಿ ಮಾಡುತ್ತಿದ್ದಾರೆ. “ವಿಧಾನಸಭಾ ಕ್ಷೇತ್ರವೂ ಲೋಕಸಭಾ ಕ್ಷೇತ್ರದ ಭಾಗವಾಗಿದೆ. ದೆಹಲಿಯಲ್ಲಿರುವ ರಾಜ್ಯ ಸಂಸದರು ಸಂಬಂಧ ಪಟ್ಟಂತಹ ಅಧಿಕಾರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದರೆ, ರಾಜ್ಯಕ್ಕೆ ಸಹಾಯವಾಗುತ್ತದೆ ಎಂದು ಹೇಳಿದ್ದಾರೆಂದು ವರದಿಗಳು ತಿಳಿಸಿವೆ. 

ಈ ನಡುವೆ ಸಭೆಗೆ ಹಲವು ಸಂಸದರು ಗೈರು ಹಾಜರಾಗಿದ್ದರು ಎಂದು ಹೇಳಲಾಗುತ್ತಿದೆ. ಪಕ್ಷದ ಕಾರ್ಯ ಹಾಗೂ ಈಗಾಗಲೇ ಪೂರ್ವ ನಿಗದಿ ಕಾರ್ಯಕ್ರಮಗಳಿದ್ದ ಕಾರಣ ಬೆಂಗಳೂರಿನ ಸಂಸದರು ಸೇರಿದಂತೆ 10 ಮಂದಿ ಗೈರು ಹಾಜರಾಗಿದ್ದರು ಎಂದು ತಿಳಿದುಬಂದಿದೆ. 

ಡಿ.ವಿ.ಸದಾನಂದಗೌಡ ಹಾಗೂ ಪ್ರಹ್ಲಾದ್‌ ಜೋಶಿ, ನಳಿನ್‌ಕುಮಾರ್‌ ಕಟೀಲ್‌, ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ಪಿ.ಸಿ. ಮೋಹನ್‌, ಅನಂತಕುಮಾರ್‌ ಹೆಗಡೆ, ಅಣ್ನಾಸಾಹೇಬ್‌ ಜೊಲ್ಲೆ ಹಾಗೂ ರಾಜ್ಯಸಭಾ ಸದಸ್ಯರಾದ ನಿರ್ಮಲಾ ಸೀತಾರಾಮನ್‌, ಈರಣ್ಣ ಕಡಾಡಿ ಸಭೆಗೆ ಹಾಜರಾಗಿರಲಿಲ್ಲ ಎಂದು ವರದಿಗಳು ತಿಳಿಸಿವೆ. 

ಸದಾನಂದ ಗೌಡ ಅವರು ಕ್ವಾರಂಟೈನ್'ಗೊಳಗಾಗಿದ್ದು, ಸಂಸದ ತೇಜಸ್ವಿ ಸೂರ್ಯ ಹಾಗೂ ಪಿಸಿ ಮೋಹನ್ ಅವರು ದೆಹಲಿಯಲ್ಲಿದ್ದಾರೆಂದು ಹೇಳಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com