ಮುಖ್ಯಮಂತ್ರಿ ಲಕ್ಷ ವಸತಿ ಯೋಜನೆ ಜುಲೈನಲ್ಲಿ ಪೂರ್ಣ: ಸಚಿವ ವಿ.ಸೋಮಣ್ಣ 

ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಒಂದು ಲಕ್ಷ ವಸತಿ ಯೋಜನೆಯಡಿ ನಿರ್ಮಾಣ ಮಾಡಲಾಗುತ್ತಿರುವ ಮನೆಗಳನ್ನು ಮುಂದಿನ ವರ್ಷದ ಜೂನ್ ಅಥವಾ ಜುಲೈ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ವಿ.ಸೋಮಣ್ಣ
ವಿ.ಸೋಮಣ್ಣ

ಬೆಂಗಳೂರು: ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಒಂದು ಲಕ್ಷ ವಸತಿ ಯೋಜನೆಯಡಿ ನಿರ್ಮಾಣ ಮಾಡಲಾಗುತ್ತಿರುವ ಮನೆಗಳನ್ನು ಮುಂದಿನ ವರ್ಷದ ಜೂನ್ ಅಥವಾ ಜುಲೈ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ  ಅಧಿಕಾರಿಗಳು ಮತ್ತು ಗುತ್ತಿಗೆದಾರರ ಜತೆ ಸಭೆ ನಡೆಸಿದ ಬಳಿಕ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು,೪೬,೪೯೯ ಮನೆಗಳನ್ನು ೪,೪೭೫ ಕೋಟಿ ರು.ವೆಚ್ಚದಲ್ಲಿ ನಿರ್ಮಾಣ ಮಾಡುವ ಸಂಬಂಧ ಈ ಹಿಂದಿನ ಸರ್ಕಾರಗಳು ಆಡಳಿತಾತ್ಮಕ ಅನುಮೋದನೆ ನೀಡಿತ್ತು.ಈಗ ೪೩,೮೬೭ ಮನೆ ಗಳನ್ನು ನಿರ್ಮಿಸಲು ೬-೭ ಗುತ್ತಿಗೆದಾರರಿಗೆ ಗುತ್ತಿಗೆ ನೀಡಲಾಗಿದೆ. ೩೧ ಸಾವಿರಕ್ಕೂ ಹೆಚ್ಚು ಮನೆಗಳ ಅಡಿಪಾಯ ಮುಗಿದು ಮುಂದಿನ ಕಾರ್ಯ ನಡೆದಿದೆ.೧೭ ಮನೆಗಳ ಛಾವಣಿ ಮತ್ತು ೧೬ ಮನೆಗಳನ್ನು ಪ್ರಾಯೋಗಿಕ ಆಧಾರ ದ ಮೇಲೆ ನಿರ್ಮಿಸಲಾಗಿದೆ.ಬಾಕಿ ಉಳಿದ ಮನೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುತ್ತೇAವೆ. ಶೇ.೫೦ರಷ್ಟನ್ನು ಶಾಸಕರು ಮತ್ತು ಸಂಸ ದರು ಶಿಫಾರಸು ಮಾಡಿದವರಿಗೆ ಹಾಗೂ ಉಳಿದ ಶೇ.೫೦ರಷ್ಟನ್ನು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ರುವ ಮಧ್ಯಮ ಬಡ ವರ್ಗದವರಿಗೆ ನೀಡಲಾಗುತ್ತದೆ. ಅವರಿಗೂ ಸಹ ಸ್ಥಳ ತೋರಿಸಿ ಅವರು ಇಚ್ಛೆಪಟ್ಟ ಸ್ಥಳದಲ್ಲಿಯೇ ಮಂಜೂರು ಮಾಡಲಾಗುವುದು. ಗುತ್ತಿಗೆದಾರರಿಗೆ ಅಧಿಕಾರಿಗಳು ಸಹಕಾರ ನೀಡಬೇಕು. ಕಿರಿಕಿರಿ ನೀಡದೆ ಸಹಕಾರ ನೀಡಬೇಕು. ಪ್ರತಿ ದಿನ ಮಧ್ಯಾಹ್ನದ ಬಳಿಕ ಎರಡು ತಾಸು ಗುತ್ತಿಗೆದಾರರ ಭೇಟಿಗೆ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರು ನೀಡಿ ಅವರ ಸಮಸ್ಯೆಗಳನ್ನು ಆಲಿಸಬೇಕು. ಅಂತೆಯೇ ಗುತ್ತಿಗೆದಾರರು ಸಹ ಯಾವುದನ್ನೂ ದುರು ಪಯೋಗಪಡಿಸಿಕೊಳ್ಳಬಾರದು ಎಂದು ಸೂಚನೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com