ರೈತರಿಂದ ದೆಹಲಿಯಲ್ಲಿ ಮುಂದುವರೆದ ಪ್ರತಿಭಟನೆ: ರಾಜ್ಯ ರೈತರಿಂದಲೂ ಒಗ್ಗಟ್ಟು ಪ್ರದರ್ಶನ, ಬೆಂಗಳೂರಿನಲ್ಲಿ ಇಂದು ಪ್ರತಿಭಟನೆ

ಕೇಂದ್ರ ಸರ್ಕಾರವು ಇತ್ತೀಚೆಗೆ ಜಾರಿಗೊಳಿಸಿದ ಕೃಷಿ ಸಂಬಂಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ದೆಹಲಿ ಗಡಿಯಲ್ಲಿ 3 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಹರಿಯಾಣ ಮತ್ತು ಪಂಜಾಬ್ ರೈತರೊಂದಿಗೆ ಒಗ್ಗಟ್ಟು ಪ್ರದರ್ಶಿಸಲು ಮುಂದಾಗಿರುವ ರಾಜ್ಯದ ರೈತರು ಸೋಮವಾರ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೇಂದ್ರ ಸರ್ಕಾರವು ಇತ್ತೀಚೆಗೆ ಜಾರಿಗೊಳಿಸಿದ ಕೃಷಿ ಸಂಬಂಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ದೆಹಲಿ ಗಡಿಯಲ್ಲಿನ ರಸ್ತೆಗಳಲ್ಲಿ ಬೀಡು ಬಿಟ್ಟು 3 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಹರಿಯಾಣ ಮತ್ತು ಪಂಜಾಬ್ ರೈತರೊಂದಿಗೆ ಒಗ್ಗಟ್ಟು ಪ್ರದರ್ಶಿಸಲು ಮುಂದಾಗಿರುವ ರಾಜ್ಯದ ರೈತರು ಸೋಮವಾರ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. 

ಇದಲ್ಲದೆ, ಡಿಸೆಂಬರ್ 7 ರಿಂದ ರಾಜ್ಯ ವಿಧಾನಸಭೆ ಅಧಿವೇಶನ  ನಡೆಯಲಿದ್ದು, ಈ ವೇಳೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ರೈತ ಸಂಘಟನೆಗಳು ನಿರ್ಧರಿಸಿವೆ ಎಂದು ತಿಳಿದುಬಂದಿದೆ. 

ಕರ್ನಾಟಕ ಕಬ್ಬು ಬೆಳೆಗಾರರ ಸಂಘಗಳ ರಾಜ್ಯ ಸಂಘಟನಾ ಕಾರ್ಯದರ್ಶಿ ಎ. ದೇವರಾಜ್ ಅವರು ಮಾತನಾಡಿ, ರೈತರು, ದಲಿತರು ಮತ್ತು ಕಾರ್ಮಿಕರ ಸಂಘಟನೆಗಳನ್ನು ಒಳಗೊಂಡಿರುವ ಐಕ್ಯ ಹೋರಾಟ ಸಮಿತಿಯ ಸದಸ್ಯರು ಸೋಮವಾರ ಬೆಂಗಳೂರಿನ ಮೌರ್ಯ ವೃತ್ತದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಸಾಂಕೇತಿಕ ಪ್ರತಿಭಟನೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ. 

ಇದೇ ವೇಳೆ ದೆಹಲಿಯಲ್ಲಿ ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ಬಳಕೆ ಮಾಡಿರುವ ಜಲಫಿರಂಗಿ ಹಾಗೂ ಅಶ್ರುವಾಯು ಬಳಕೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ಅವರು, ರೈತ ವಿರೋಧಿ ನೀತಿಗಳ ವಿರುದ್ಧ ಸಮಿತಿಯು ಪ್ರತಿಭಟನೆಯನ್ನು ಮುಂದುವರೆಸಲಿದೆ ಎಂದು ಹೇಳಿದ್ದಾರೆ. 

ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು ಮಾತನಾಡಿ, ಬೆಂಗಳೂರಿನಲ್ಲಿ ಡಿಸೆಂಬರ್ 7 ರಿಂದ ಬೃಹತ್ ರ್ಯಾಲಿ ನಡೆಸಲಾಗುತ್ತೆದ ಎಂದು ತಿಳಿಸಿದ್ದಾರೆ. 

ಇಂದು ನಡೆಯಲಿರುವ ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 10,000ಕ್ಕೂ ಹೆಚ್ಚು ರೈತರು ಪಾಲ್ಗೊಳ್ಳಲಿದ್ದಾರೆ. ಇದೇ ರೈತರು ಡಿಸೆಂಬರ್ 7-15 ರವರೆಗೂ ನಡೆಯಲಿರುವ ವಿಧಾನಸಭೆ ಅಧಿವೇಶನದ ಸಂದರ್ಭದ ಪ್ರತಿಭಟನೆಯಲ್ಲೂ ಭಾಗಿಯಾಗಲಿದ್ದಾರೆಂದು ಹೇಳಿದ್ದಾರೆ. 

ಪ್ರತಿಭಟನಾನಿರತ ರೈತರನ್ನು ಕೇಂದ್ರ ಸರ್ಕಾರ ಕೂಡಲೇ ಮಾತುಕತೆಗೆ ಕರೆಯಬೇಕಿದೆ. ಕಾರ್ಪೊರೇಟ್ ಸಂಸ್ಥೆಗಳಿಗೆ ಸಹಾಯ ಮಾಡುವ ಸಲುವಾಗಿ ಕೃಷಿ ಮಸೂದೆಯನ್ನು ಜಾರಿಗೆ ತರಲಾಗಿದೆ ಎಂದಿದ್ದಾರೆ. 

ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬುರ್ ಶಾಂತಕುಮಾರ್ ಮಾತನಾಡಿ,  ರೈತರ ಕಾಳಜಿಯನ್ನು ಪರಿಹರಿಸುವುದು ಸರ್ಕಾರದ ಆದ್ಯತೆಯಾಗಿರಬೇಕು ಮತ್ತು ಕಾರ್ಪೊರೇಟ್‌ಗಳಿಗೆ ಸಹಾಯ ಮಾಡಬಾರದು ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com