ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪಿಗೆ ಬಿಎಸ್ ವೈ, ಬಿಜೆಪಿ ನಾಯಕರ ಸ್ವಾಗತ; ಕಾಂಗ್ರೆಸ್ ಸಿಡಿಮಿಡಿ

ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಕುರಿತು ಸಿಬಿಐ ನ್ಯಾಯಾಲಯ ನೀಡಿರುವ ತೀರ್ಪನ್ನು ಸ್ವಾಗತ ಮಾಡುತ್ತೇನೆ. ಸತ್ಯಕ್ಕೆ ಸಂದ ಜಯ ಇದಾಗಿದೆ ಎಂದು ಮುಖ್ಯಮಂತ್ರಿ  ಬಿ.ಎಸ್.ಯಡಿಯೂರಪ್ಪನವರು ಹೇಳಿದ್ದಾರೆ. 
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಕುರಿತು ಸಿಬಿಐ ನ್ಯಾಯಾಲಯ ನೀಡಿರುವ ತೀರ್ಪನ್ನು ಸ್ವಾಗತ ಮಾಡುತ್ತೇನೆ. ಸತ್ಯಕ್ಕೆ ಸಂದ ಜಯ ಇದಾಗಿದೆ ಎಂದು ಮುಖ್ಯಮಂತ್ರಿ  ಬಿ.ಎಸ್.ಯಡಿಯೂರಪ್ಪನವರು ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯರೆಲ್ಲರೂ ಸಂತೋಷ ಪಡುವ ಶುಭ ದಿವಸ ಇದಾಗಿದೆ. ನಾನು ಕೂಡ ಹೋರಾಟದಲ್ಲಿ ನೇರವಾಗಿ ಭಾಗಿಯಾಗಿದ್ದು, ನನಗೆ ವೈಯಕ್ತಿಕವಾಗಿ ಖುಷಿ ತಂದಿದೆ ಎಂದರು.

ಬಹಳ ಜನರು ತೀರ್ಪು ಯಾವ ರೀತಿ ಬರಲಿದೆ ಎಂದು ಕಾಯುತ್ತಿದ್ದರು. ಹೋರಾಟಕ್ಕೆ ಯಾವಾಗಲೂ ಗೆಲುವು ಸಿಗಲಿದೆ ಎನ್ನುವುದು ಸಾಬೀತಾಗಿದೆ. ಅಡ್ವಾಣಿ ಅವರ ಮಾಡಿದ್ದ ಭಾಷಣ ಯಾರು ಮರೆಯಲು ಸಾಧ್ಯವಿಲ್ಲ. ಅಯೋಧ್ಯೆಯಲ್ಲಿ ಈಗಾಗಲೇ ರಾಮ ಮಂದಿರ ನಿರ್ಮಾಣಕ್ಕೆ ಕೆಲಸ ಆರಂಭವಾಗಿದೆ. ಇದಕ್ಕೆ ಅಡ್ವಾಣಿ, ಮುರಳಿ ಮನೋಹರ ಜೋಶಿ ಉಮಾಭಾರತಿ ಹೋರಾಟ ಕಾರಣ. ಈ ತೀರ್ಪನ್ನು ಸ್ವಾಗತ ಮಾಡಿದ್ದೇನೆ ಎಂದರು. 

ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ಬಿಜೆಪಿ ನಾಯಕರು ತೀರ್ಪನ್ನು ,ಸ್ವಾಗತಿಸಿದ್ದಾರೆ, ಆದರೆ ಕಾಂಗ್ರೆಸ್ ಮುಖಂಡರು ಬಾಬ್ರಿ ಮಸೀದಿ ತೀರ್ಪಿಗೆ ವಿರೋಧ ವ್ಯಕ್ತ ಪಡಿಸಿದ್ದಾರೆ.  ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ತೀರ್ಪು ದುರಾದೃಷ್ಟಕರ ಎಂದು ಅಭಿಪ್ರಾಯಪಟ್ಟಿದ್ದಾರೆ.

ಲಕ್ನೋ ಸಿಬಿಐ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದ್ದು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ ಜೋಷಿ, ಉಮಾಭಾರತಿ ಸೇರಿದಂತೆ 32ಆರೋಪಿಗಳನ್ನು ನಿರ್ದೋಷಿ ಎಂದು ತೀರ್ಪು ನೀಡಿದೆ. ಇದು ಉದ್ದೇಶಪೂರ್ವಕವಾಗಿ ನಡೆದ ಕೃತ್ಯ ಅಲ್ಲ ಎಂದು ಅಭಿಪ್ರಾಯಪಟ್ಟಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com