ವಿವಾದಿತ ಕೃಷಿ, ಭೂ ಸುಧಾರಣಾ ತಿದ್ದುಪಡಿ ಮಸೂದೆ ಜಾರಿಗೆ ಸುಗ್ರೀವಾಜ್ಞೆ ಹೊರಡಿಸಲು ಸಚಿವ ಸಂಪುಟ ಒಪ್ಪಿಗೆ

ರೈತರ ಭಾರೀ ಪ್ರತಿಭಟನೆ, ಆಕ್ರೋಶಕ್ಕೆ ಕಾರಣವಾಗಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಕೈಗಾರಿಕಾ ವ್ಯಾಜ್ಯಗಳ ಕಾಯ್ದೆ(ಕಾರ್ಮಿಕ ತಿದ್ದುಪಡಿ ಕಾಯ್ದೆ) ಜಾರಿಗೊಳಿಸಲು ಸುಗ್ರೀವಾಜ್ಞೆ ಹೊರಡಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ಬೆಂಗಳೂರು: ರೈತರ ಭಾರೀ ಪ್ರತಿಭಟನೆ, ಆಕ್ರೋಶಕ್ಕೆ ಕಾರಣವಾಗಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಕೈಗಾರಿಕಾ ವ್ಯಾಜ್ಯಗಳ ಕಾಯ್ದೆ(ಕಾರ್ಮಿಕ ತಿದ್ದುಪಡಿ ಕಾಯ್ದೆ) ಜಾರಿಗೊಳಿಸಲು ಸುಗ್ರೀವಾಜ್ಞೆ ಹೊರಡಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಇತ್ತೀಚೆಗೆ ನಡೆದ ವಿಧಾನಸಭೆ ಅಧಿವೇಶನದಲ್ಲಿ ಈ ಕಾಯ್ದೆಗಳನ್ನು ಅಂಗೀಕರಿಸಲಾಗಿತ್ತು. ಆದರೆ ವಿಧಾನ ಪರಿಷತ್ ನಲ್ಲಿ ಇನ್ನೂ ಅಂಗೀಕಾರಗೊಂಡಿಲ್ಲ. ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ಪರಿಷತ್ ನಲ್ಲಿ ಇನ್ನೂ ಅಂಗೀಕಾರಗೊಂಡಿಲ್ಲ. ಆದರೆ ಕಾರ್ಮಿಕ ತಿದ್ದುಪಡಿ ಕಾಯ್ದೆ ಪರಿಷತ್ ನಲ್ಲಿ ಸೋಲನುಭವಿಸಿತ್ತು. ಪರಿಷತ್ ನಲ್ಲಿ ಬಿಜೆಪಿಗೆ ಬಹುಮತ ಇಲ್ಲ. ಹೀಗಾಗಿ ಈ ವಿವಾದಿತ ಕಾಯ್ದೆ ಜಾರಿಗೊಳಿಸಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆಯ ಮೊರೆ ಹೋಗಿದೆ.

ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರಕೈಗೊಳ್ಳಲಾಗಿದೆ.

ಇನ್ನು 4,636.50 ಕೋಟಿ ರೂಪಾಯಿ ವೆಚ್ಚದಲ್ಲಿ ಟಾಟಾ ಟೆಕ್ನಾಲಜೀಸ್ ಲಿಮಿಟೆಡ್ ಮೂಲಕ 150 ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವುದು, ಕ್ರೀಡಾಪಟುಗಳನ್ನು ಪಿಎಸ್ಐ ಮತ್ತು ಡಿವೈಎಸ್ಪಿ ಹುದ್ದೆಗಳಿ ನೇರ ನೇಮಕಾತಿಗೆ ಅವಕಾಶ ಕಲ್ಪಿಸುವ ವಿಶೇಷ ನಿಯಮಗಳು, ಮೌಲಾನಾ ಆಜಾದ್ ಟ್ರಸ್ಟ್ ಹಾಗೂ ಡಾ.ಜಗಜೀವನ್ ರಾಂ ಸಂಶೋಧನಾ ಕೇಂದ್ರ ಸ್ಥಾಪನೆ ಸೇರಿದಂತೆ ಹಲವು ಪ್ರಸ್ತಾವಗಳಿಗೆ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com