ಬಾಗಲಕೋಟೆಯಲ್ಲಿ 10 ಸಾವಿರ ಗಡಿದಾಟಿದ ಕೊರೋನಾ ಸೋಂಕಿತರ ಸಂಖ್ಯೆ

ಕಳೆದೊಂದು ವಾರದಿಂದ ಬಾಗಲಕೋಟೆಯಲ್ಲಿ 800 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10,000ಕ್ಕೆ ಏರಿಕೆಯಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬಾಗಲಕೋಟೆ: ಕಳೆದೊಂದು ವಾರದಿಂದ ಬಾಗಲಕೋಟೆಯಲ್ಲಿ 800 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10,000ಕ್ಕೆ ಏರಿಕೆಯಾಗಿದೆ. 

ಕಳೆದ 24 ಗಂಟೆಗಳಲ್ಲಿ 68 ಕೊರೋನಾ ಹಾಗೂ ಎರಡು ಮೃತ ಪ್ರಕರಣಗಳನ್ನು ದೃಢಪಟ್ಟಿವೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 10641 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 9425 ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. 

ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 12, ಬಾದಾಮಿ 8, ಹುನಗುಂದ 20, ಬೀಳಗಿ 6, ಮುಧೋಳ 11, ಜಮಖಂಡಿ 11 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಜಿಲ್ಲಾ ಕೋವಿಡ್ ಲ್ಯಾಬ್ ನಲ್ಲಿ ಪರೀಕ್ಷಿಸಲಾಗುತ್ತಿದ್ದ 1509 ಸ್ಯಾಂಪಲ್'ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 1096946 ಸ್ಯಾಂಪಲ್'ಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 94987 ನೆಗೆಟಿವ್ ಪ್ರಕರಣ, 10641 ಪಾಸಿಟಿವ್ ಪ್ರಕರಣ ಹಾಗೂ 109 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 1109 ಮಾತ್ರ ಸಕ್ರಿಯ ಪ್ರಕರಣಗಳು ಇವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com