ಕೆಪಿಸಿಎಲ್ ಪವರ್ ಪ್ಲಾಂಟ್'ನಲ್ಲಿ ಸ್ಫೋಟ: 15 ಮಂದಿಗೆ ಗಾಯ

ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಯಲಹಂಕ ಸಮೀಪದ ಅನಿಲ ಆಧಾರಿಕ ವಿದ್ಯುತ್ ಸ್ಥಾಪರದಲ್ಲಿ (ವೈಸಿಸಿಪಿಪಿ) ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ 15 ಮಂದಿ ಎಂಜಿನಿಯರ್'ಘಳು ಗಾಯಗೊಂಡಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ. 
ಕಾರ್ಯಾಚರಣೆ ನಡೆಸುತ್ತಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು
ಕಾರ್ಯಾಚರಣೆ ನಡೆಸುತ್ತಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು

ಬೆಂಗಳೂರು: ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಯಲಹಂಕ ಸಮೀಪದ ಅನಿಲ ಆಧಾರಿಕ ವಿದ್ಯುತ್ ಸ್ಥಾಪರದಲ್ಲಿ (ವೈಸಿಸಿಪಿಪಿ) ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ 15 ಮಂದಿ ಎಂಜಿನಿಯರ್'ಘಳು ಗಾಯಗೊಂಡಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ. 

ದೊಡ್ಡಬಳ್ಳಾಪುರ ರಸ್ತೆಯಲ್ಲಿರುವ ವೈಸಿಸಿಪಿಪಿ ಕಾರ್ಯಾರಂಭದ ಪ್ರಾಯೋಗಿಕ ಪರೀಕ್ಷೆ ವೇಳೆ ಈ ದುರಂತ ಸಂಭವಿಸಿದ್ದ, ಘಟನೆಯಲ್ಲಿ ಕೆಪಿಸಿಎಲ್'ನ (ಕರ್ನಾಟಕ ವಿದ್ಯುತ್ ನಿಗಮ) 11 ಹಾಗೂ ಬಿಹೆಚ್ಇಎಲ್ ಮತ್ತು ಜಿಇ ಕಂಪನಿಯ ತಲಾ ತಬ್ಬರು ಎಂಜಿನಿಯರ್ ಗಳು ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಇನ್ನುಳಿದವರು ಪ್ರಾಣಾಪಾಯದಿಂದ ಸುರಕ್ಷಿತವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

2015ರಲ್ಲಿ ಯಲಹಂಕದ ಸಮೀಪ 370 ಮೆಗಾ ವ್ಯಾಟ್ ಉತ್ಪಾದನಾ ಸಾಮರ್ಥ್ಯದ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಸ್ಥಾಪನೆಗೆ ಕೆಪಿಸಿಎಲ್ ಸಂಸ್ಥೆ ಅನುಮತಿ ನೀಡಿದೆ. ಈ ಯೋಜನೆಯ ಕಾಮಗಾರಿಯನ್ನು ಬಿಇಎಎಲ್ ಸಂಸ್ಥೆ ಗುತ್ತಿದೆ ಪಡೆದಿದೆ. ಮೊದಲ ಘಟಕದ ಕೆಲಸಗಳು ಪೂರ್ಣಗೊಂಡಿದ್ದು, ಅಧಿಕೃತ ಚಾಲನೆಗೂ ಮುನ್ನ ಪ್ರಾಯೋಗಿಕ ಪರೀಕ್ಷೆಗೆ ತಾಂತ್ರಿಕ ವರ್ಗ ಭರದ ಸಿದ್ಧತೆಯಲ್ಲಿ ತೊಡಗಿತ್ತು. ಆಗ ಶುಕ್ರವಾರ ಮುಂಜಾನೆ 3.20ರಲ್ಲಿ ಲೂಬ್ರಿಕೇಷನ್ ಮತ್ತು ಎಲ್'ಪಿಜಿ ಅನಿಲ್ ಸೋರಿಕೆಯಾಗಿ ಕಾಣಿಸಿಕೊಂಡಿದೆ. ಟರ್ಬೈನ್'ಗೆ ಬೆಂಕಿ ಕಿಡಿ ತಾಕಿ ಸ್ಫೋಟಗೊಂಡಿದೆ. ಈ ವೇಳೆ ಕೆಲಸದಲ್ಲಿ ನಿರತರಾಗಿದ್ದ ಎಂಜಿನಿಯರ್'ಗಳು ಅಪಾಯ ಸಿಲುಕಿದ್ದಾರೆ. ಅವರಲ್ಲಿ ಇಬ್ಬರಿಗೆ ಬೆಂಕಿ ಸುಟ್ಟು ಗಾಯವಾಗಿವೆ. ಈ ಘಟನೆ ಸಂಬಂಧ ಯಲಹಂಕ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com