ಕೊರೋನಾ ನಿಯಮ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ: ದಂಡ ಕಟ್ಟದೆ ಬಿಬಿಎಂಪಿ ಮಾರ್ಷಲ್'ಗಳೊಂದಿಗೆ ಸಾರ್ವಜನಿಕರ ಜಗಳ!

ನಗರದಲ್ಲಿ ಕೊರೋನಾ ಸೋಂಕು ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದವರ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳದವರಿಗೆ ದಂಡ ವಿಧಿಸುತ್ತಿರುವ ಮಾರ್ಷಲ್'ಗಳೊಂದಿಗೆ ಸಾರ್ವಜನಿಕರು ಜಗಳಕ್ಕಿಳಿಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. 

Published: 03rd October 2020 12:07 PM  |   Last Updated: 03rd October 2020 12:55 PM   |  A+A-


Representative image

ಸಾಂದರ್ಭಿಕ ಚಿತ್ರ

Posted By : Manjula VN
Source : The New Indian Express

ಬೆಂಗಳೂರು: ನಗರದಲ್ಲಿ ಕೊರೋನಾ ಸೋಂಕು ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದವರ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳದವರಿಗೆ ದಂಡ ವಿಧಿಸುತ್ತಿರುವ ಮಾರ್ಷಲ್'ಗಳೊಂದಿಗೆ ಸಾರ್ವಜನಿಕರು ಜಗಳಕ್ಕಿಳಿಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. 

ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ನಿರ್ಲಕ್ಷ್ಯವಹಿಸುತ್ತಿರುವ ಪರಿಣಾಮ ನಗರದಲ್ಲಿ ಪ್ರತಿದಿನ ನಾಲ್ಕು ಸಾವಿರಕ್ಕೂ ಅಧಿಕ ಕೊರೋನಾ ಸೋಂಕು ಪ್ರಕರಣ ಪತ್ತೆಯಾಗುತ್ತಿವೆ. ಸಕ್ರಿಯ ಸೋಂಕಿತರ ಸಂಖ್ಯೆ 48 ಸಾವಿರಕ್ಕೆ ಏರಿಕೆಯಾಗಿದೆ. 

ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರ ಸೋಂಕು ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುತ್ತಿದ್ದಾರೆ. ಈ ರೀತಿ ದಂಡ ವಿಧಿಸುವ ಸಂದರ್ಭದಲ್ಲಿ ಸಾರ್ವಜನಿಕರು ಬಿಬಿಎಂಪಿ ಮಾರ್ಷಲ್'ಗಳ ಜತೆ ಜಗಳಕ್ಕೆ ಇಳಿಯುತ್ತಿದ್ದಾರೆ. ದಂಡ ಪಾವತಿ ಮಾಡುವುದಿಲ್ಲ ಎಂದು ವಾದಕ್ಕೆ ಇಳಿಯುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ರೀತಿ ವರ್ತನೆ ತೋರುವ ವ್ಯಕ್ತಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವುದು ಹಾಗೂ ಸ್ಥಳೀಯ ಪೊಲೀಸರ ನೆರವು ಪಡೆದು ದಂಡ ವಸೂಲಿ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಕೊರೋನಾ ನಿಯಮ ಉಲ್ಲಂಘಿಸುವವರಿಗೆ ವಿಧಿಸಲಾಗುತ್ತಿದ್ದ ದಂಡದ ಮೊತ್ತವನ್ನು 1000ಕ್ಕೆ ಏರಿಕೆ ಮಾಡಲಾಗಿದ್ದು, ಕೆಆರ್. ಪುರಂನಲ್ಲಿ ನಿಯಮ ಉಲ್ಲಂಘಿಸಿದ ಇಬ್ಬರು ವ್ಯಕ್ತಿಗಳಿಗೆ ಬಿಬಿಎಂಪಿ ಮಾರ್ಷಲ್ ಗಳು ದಂಡ ವಿಧಿಸಲು ಮುಂದಾದಾಗ ವ್ಯಕ್ತಿಗಳು ಮಾರ್ಷಲ್ ಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಇದೀಗ ಇಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ. 

ಬಂಧಿತರನ್ನು ಅರುಣ್ ಟಿ (26) ಹಾಗೂ ಜಗದೀಶ್ ಜಿಪಿ (28) ಎಂದು ಹೇಳಲಾಗುತ್ತಿದೆ. ಇಬ್ಬರೂ ಬಾರ್ ನಲ್ಲಿ ಸಂಪ್ಲೈಯರ್ ಗಳಾಗಿ ಕೆಲಸ ಮಾಡುತ್ತಿದ್ದು, ಇಬ್ಬರೂ ಆರೋಪಿಗಳು ಮಾಸ್ಕ್ ಧರಿಸದೆ ಬೆಳಿಗ್ಗೆ 11.30ರ ಸುಮಾರಿಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಬಿಬಿಎಂಪಿ ಮಾರ್ಷಲ್ ಗಳು ತಡೆದಿದ್ದಾರೆ. ಬಳಿಕ ದಂಡ ಕಟ್ಟುವಂತೆ ತಿಳಿಸಿದ್ದಾರೆ. ಇದಕ್ಕೆ ನಿರಾಕರಿಸಿರುವ ಆರೋಪಿಗಳು ಹಲ್ಲೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. 

ಘಟನೆ ಸಂಬಂಧ ಹೆಲ್ತ್ ಇನ್ಸ್ ಪೆಕ್ಟರ್ ನಾಗರಾಜ್ ಅವರು ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 

ಬಂಧನದ ಬಳಿಕ ಆರೋಪಿಗಳು ತಮ್ಮ ಬಳಿ ದಂಡ ಕಟ್ಟಲು ಹಣವಿರಲಿಲ್ಲ. ಆದರೂ ಹಣ ಕಟ್ಟುವಂತೆ ಅಧಿಕಾರಿ ಬಲವಂತ ಮಾಡಿದ್ದರು. ಹೀಗಾಗಿ ನಮಗೆ ಕೋಪ ಬಂದಿತ್ತು ಎಂದಿದ್ದಾರೆ. 

Stay up to date on all the latest ರಾಜ್ಯ news
Poll
Farmers_Protest1

ಹೊಸ ಕೃಷಿ ಕಾನೂನುಗಳ ಬಗ್ಗೆ ರೈತರನ್ನು ದಾರಿ ತಪ್ಪಿಸಲಾಗುತ್ತಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp