ನಾಲೆ ಕೆಲಸ ಮಾಡುವಾಗ ಮಣ್ಣು ಕುಸಿದು ಕಾರ್ಮಿಕ ಸಾವು

ನಾಲೆಯಲ್ಲಿ ಕೆಲಸ ಮಾಡುವಾಗ ಮಣ್ಣು ಕುಸಿದು ಕಾರ್ಮಿಕ ಸಾವಿಗೀಡಾಗಿರುವ ಘಟನೆ ಪಾಂಡವಪುರ ತಾಲೂಕಿನ ದೇವೇಗೌಡ ಕೊಪ್ಪಲು ಗ್ರಾಮದ ಬಳಿ ನಡೆದಿದೆ.

Published: 03rd October 2020 08:32 PM  |   Last Updated: 03rd October 2020 08:32 PM   |  A+A-


dead1

ಸಾಂದರ್ಭಿಕ ಚಿತ್ರ

Posted By : Lingaraj Badiger
Source : RC Network

ಮಂಡ್ಯ: ನಾಲೆಯಲ್ಲಿ ಕೆಲಸ ಮಾಡುವಾಗ ಮಣ್ಣು ಕುಸಿದು ಕಾರ್ಮಿಕ ಸಾವಿಗೀಡಾಗಿರುವ ಘಟನೆ ಪಾಂಡವಪುರ ತಾಲೂಕಿನ ದೇವೇಗೌಡ ಕೊಪ್ಪಲು ಗ್ರಾಮದ ಬಳಿ ನಡೆದಿದೆ.

ಮಹೇಶ್(೨೮) ಮೃತ ಕಾರ್ಮಿಕನಾಗಿದ್ದು, ಈತ ಮೂಲತಃ ಚಾಮರಾಜನಗರ ಜಿಲ್ಲೆಯ ಬೇಗೂರಿನ ನಿವಾಸಿ ಎಂದು ತಿಳಿದು ಬಂದಿದೆ.

ಎಂದಿನಂತೆಯೇ ಶುಕ್ರವಾರ ಬೆಳಗ್ಗೆ ದೇವೇಗೌಡ ಕೊಪ್ಪಲು ಗ್ರಾಮದ ಬಳಿ ನಡೆಯುತ್ತಿದ್ದ ನಾಲೆಯ ಕೆಲಸಕ್ಕೆ ತೆರಳಿದ್ದರು. ಸಂಜೆ ಕೆಲಸ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆಯೆ ನಾಲೆವಾಡೆಯ ಮಣ್ಣುರಾಶಿ ಮಹೇಶ್ ಮೇಲೆ ಕುಸಿದು ಬಿದ್ದಿದೆ. ಗಾಯಗೊಂಡಿದ್ದ ಕಾರ್ಮಿಕ ಮಹೇಶ್ನನ್ನು ಸ್ಥಳೀಯ ಪಾಂಡವಪುರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾನೆ. ಈ ಸಂಬಂಧ ಪಾಂಡವಪುರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
-ನಾಗಯ್ಯ

Stay up to date on all the latest ರಾಜ್ಯ news
Poll
Narendra Singh Tomar

ಕೃಷಿ ಕಾನೂನು ಸಂಬಂಧ ರೈತರು ಮತ್ತು ಕೇಂದ್ರದ ನಡುವಣ ಬಿಕ್ಕಟ್ಟಿಗೆ ಹೊರಗಿನ ಶಕ್ತಿಗಳು ಕಾರಣ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಹೇಳಿದ್ದಾರೆ.


Result
ಹೌದು
ಇಲ್ಲ
flipboard facebook twitter whatsapp