ಪರಪ್ಪನ ಅಗ್ರಹಾರ ಕೈದಿಯ ಪೆರೋಲ್ ಗೆ ಲಂಚ: ಜೈಲು ಅಧೀಕ್ಷಕ ಜಯರಾಮ್ ಎಸಿಬಿ ಬಲೆಗೆ

ಪರಪ್ಪನ ಅಗ್ರಹಾರದ ಕೈದಿಯೊಬ್ಬನಿಗೆ ಪೆರೋಲ್ ನೀಡಲು ಲಂಚ ಪಡೆಯುತ್ತಿದ್ದ ಕಾರಾಗೃಹದ ಅಧಿಕಾರಿಯೊಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಪರಪ್ಪನ ಅಗ್ರಹಾರದ ಕೈದಿಯೊಬ್ಬನಿಗೆ ಪೆರೋಲ್ ನೀಡಲು ಲಂಚ ಪಡೆಯುತ್ತಿದ್ದ ಕಾರಾಗೃಹದ ಅಧಿಕಾರಿಯೊಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ.

ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ತುಮಕೂರು ಮೂಲದ ಅಪರಾಧಿಯೊಬ್ಬರಿಗೆ 14 ವರ್ಷ ಜೈಲು ಶಿಕ್ಷೆ ನೀಡಿ ಸೆಷೆನ್ಸ್ ನ್ಯಾಯಾಲಯ ತೀರ್ಪು ನೀಡಿತ್ತು. ಇತ್ತೀಚೆಗೆ ಈ ವ್ಯಕ್ತಿ ಪೆರೋಲ್ ಕೋರಿ ಕೇಂದ್ರ ಕಾರಾಗೃಹಕ್ಕೆ ಅರ್ಜಿ ಸಲ್ಲಿಸಿದ್ದರು.

ಈ ವೇಳೆ ಕಾರಾಗೃಹದ ಅಧೀಕ್ಷಕ ಜಯರಾಮ್ ಅಪರಾಧಿಯನ್ನು ಬಿಡುಗಡೆ ಮಾಡಲು 10 ಸಾವಿರ ಹಣ ಕೇಳಿ 5 ಸಾವಿರ ಹಣ ಮುಂಗಡವಾಗಿ ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ವಿಷಯವನ್ನು ಕೈದಿ ತಮ್ಮ ಪತ್ನಿಗೆ ತಿಳಿಸಿದ್ದಾರೆ.

ಪತ್ನಿ ಕೂಡಲೇ ಎಸಿಬಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು ಕೂಡಲೇ ಎಸಿಬಿ ಅಧಿಕಾರಿಗಳು ಸಜಾ ಬಂಧಿತನ ಪತ್ನಿಯಿಂದ 5 ಸಾವಿರ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಅಧೀಕ್ಷಕ ಜಯರಾಮ್ ನನ್ನು ಬಂಧಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com