ಡ್ರಗ್ಸ್ ಕೇಸ್: ಬಿನೀಶ್ ಕೊಡಿಯೇರಿಗೆ ಸಮನ್ಸ್ ಜಾರಿ ಮಾಡಿದ ಇಡಿ 

ಡ್ರಗ್ಸ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಸಿಪಿಐ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಅವರ ಪುತ್ರ ಬಿನೀಶ್ ಕೊಡಿಯೇರಿ ಯವರಿಗೆ ಜಾರಿ ನಿರ್ದೇಶನಾಲಯದ  ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆಂದು ತಿಳಿದುಬಂದಿದೆ. 
ಬಿನೀಶ್ ಕೊಡಿಯೇರಿ
ಬಿನೀಶ್ ಕೊಡಿಯೇರಿ

ಬೆಂಗಳೂರು: ಡ್ರಗ್ಸ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಸಿಪಿಐ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಅವರ ಪುತ್ರ ಬಿನೀಶ್ ಕೊಡಿಯೇರಿ ಯವರಿಗೆ ಜಾರಿ ನಿರ್ದೇಶನಾಲಯದ  ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆಂದು ತಿಳಿದುಬಂದಿದೆ. 

ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ಆರೋಪಿಯಾಗಿರುವ ಮೊಹಮ್ಮದ್ ಅನೂಪ್ ಜೊತೆಗೆ ನಂಟು ಹೊಂದಿರುವ ಹಿನ್ನೆಲೆಯಲ್ಲಿ ಬಿನೀಶ್ ಅವರಿಗೆ ಸಮನ್ಸ್ ಜಾರಿ ಮಾಡಿರುವ ಅಧಿಕಾರಿಗಳು ಅಕ್ಟೋಬರ್ 6 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆಂದು ತಿಳಿದುಬಂದಿದೆ. 

ಪ್ರಕರಣ ಸಂಬಂಧ ಆರೋಪಿಗಳಾದ ರವೀಂದ್ರನ್ ಮತ್ತು ಅನಿಖಾ ಡಿ. ಅನೂಪ್ ಬಿನೀಶ್ ಅವರ ಆಪ್ತಸ್ನೇಹಿತರಾಗಿದ್ದರು ಎಂಹು ಹೇಳಲಾಗುತ್ತಿದೆ. 

ಪ್ರಕರಣ ಸಂಬಂಧ ಈಗಾಗಲೇ ಪರಪ್ಪನ ಅಗ್ರಹಾರ ಜೈಲು ಸೇರಿರುವ ಅನೂಪ್ ರನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಬೆಂಗಳೂರಿನಲ್ಲಿ ರೆಸ್ಟೋರೆಂಟ್ ನಲ್ಲಿದ್ದಾ ಬಿನೀಶ್ ಹಣ ನೀಡಿದ್ದರ ಕುರಿತು ಅನೂಪ್ ಬಾಯ್ಬಿಟ್ಟಿದ್ದಾನೆಂದು ತಿಳಿದುಬಂದಿದೆ. 

ಈ ನಡುವೆ ಬಿನೀಶ್ ಅವರು ಅನೂಪ್ ತಮ್ಮ ಸ್ನೇಹಿತರು ಎಂಬುದನ್ನು ಒಪ್ಪಿಕೊಂಡಿದ್ದು, ಅಕ್ರಮ ಡ್ರಗ್ಸ್ ವ್ಯವಹಾರದಲ್ಲಿ ಭಾಗಿಯಾಗಿಲ್ಲ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com