ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಇಂದು ಬೆಂಗಳೂರು 9,993 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 6,57,705ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 91 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 9,461ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 5,012 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 2,57,241ಕ್ಕೆ ಏರಿಕೆಯಾಗಿದೆ.
ಇಂದು 10,228 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 5,33,074ಕ್ಕೆ ಏರಿಕೆಯಾಗಿದೆ. 1,15,151 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement