ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಬಗ್ಗೆ ಬಿಬಿಎಂಪಿ ಸಮೀಕ್ಷೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಂದ ಸಲಹೆ, ಸೂಚನೆ, ಅಭಿಪ್ರಾಯ ಪಡೆಯಲು ಬಿಬಿಎಂಪಿ ನಿರ್ಧಾರ ಕೈಗೊಂಡಿದೆ. 

Published: 06th October 2020 09:05 AM  |   Last Updated: 06th October 2020 09:05 AM   |  A+A-


file photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಂದ ಸಲಹೆ, ಸೂಚನೆ, ಅಭಿಪ್ರಾಯ ಪಡೆಯಲು ಬಿಬಿಎಂಪಿ ನಿರ್ಧಾರ ಕೈಗೊಂಡಿದೆ. 

ಸೋಮವಾರ ಪೂರ್ವ ವಲಯದಲ್ಲಿ ಕೋವಿಡ್ ಕಮಾಂಡ್ ಸೆಂಟರ್'ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿರುವ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಅವರು, ಕೊರೋನಾ ಸೋಂಕು ದೃಢಪಟ್ಟ ಶೇ.55ರಷ್ಟು ಜನ ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇವರಿಗೆ ಕಿಟ್ ನೀಡಲಾಗುತ್ತದೆ. ಬಿಬಿಎಂಪಿ ಕಮಾಂಡ್ ಸೆಂಟರ್ ಹಾಗೂ ಆರೋಗ್ಯಾಧಿಕಾರಿಗಳು ದೂರವಾಣಿ ಮೂಲಕ ಆರೋಗ್ಯ ವಿಚಾರಿಸಲಾಗುತ್ತಿದೆ. ಅಲ್ಲದೆ, ತುರ್ತು ಸಂದರ್ಭದಲ್ಲಿ ಪ್ರತಿಕ್ರಿಯಿಸಲಾಗುತ್ತಿದೆ. ಈ ವ್ಯವಸ್ಥೆ ಸಾರ್ವಜನಿಕರಿಗೆ ತೃಪ್ತಿ ನೀಡಿದೆಯೇ ಅಥವಾ ಇಲ್ಲವೇ, ಇದರಲ್ಲಿ ಬದಲಾವಣೆ ಮಾಡಿಕೊಳ್ಳಬೇಕೆ ಎನ್ನುವುದರ ಅಭಿಪ್ರಾಯ ಮತ್ತು ಸಲಹೆ ಪಡೆಯಲು ಬಿಬಿಎಂಪಿ ತೀರ್ಮಾನಿಸಿದೆ. ಅದಕ್ಕಾಗಿ ನಿಗದಿತ ಅರ್ಜಿ ನಮೂನೆ ಸಿದ್ಧಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. 

ಖಾಸಗಿ ಆಸ್ಪತ್ರೆಗಳ ಹಾಸಿಗೆ ವ್ಯವಸ್ಥೆ, ಐಸಿಯು ಸೇರಿದಂತೆ ವಿವಿಧ ಮಾದರಿಯ ಸೌಲಭ್ಯಗಳು ಇವೆ ಎಂದು ಪರಿಶೀಲನೆ ಮಾಡಿ, ಖಾಸಗಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ನೋಡಲ್ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿಸಬೇಕು. ಬಿಬಿಎಂಪಿಯ ಪಾಲಿಕೆಯ ಪೋರ್ಟಲ್ ನಲ್ಲಿ ಯಾವ ಆಸ್ಪತ್ರೆಯಲ್ಲಿ ಎಷ್ಟು ಹಾಸಿಗೆ ಇದೆ ಎಂಬ ಮಾಹಿತಿ ಲಭ್ಯವಾಗಲಿದೆ. ಇದು ಕಾಲಮಿತಿಯಲ್ಲಿ ಪರಿಷ್ಕರಣೆ ಆಗುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. 

ಇನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಮೊಬೈಲ್ ಯೂನಿಟ್ ಗಳಲ್ಲಿ ಪ್ರತಿನಿತ್ಯ ಎಷ್ಟು ಮಂದಿಗೆ ಪರೀಕ್ಷೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಪಡೆದು, ಪ್ರತಿನಿತ್ಯ ಸೋಂಕು ಪರೀಕ್ಷೆ ಪ್ರಮಾಣವನ್ನು ಹೆಚ್ಚಳ ಮಾಡುವಂತೆ ನಿರ್ದೇಶಿಸಲಾಗಿದೆ ಎಂದಿದ್ದಾರೆ. 


Stay up to date on all the latest ರಾಜ್ಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp