ಎಂಡಿಎಂಎ ಮಾರಾಟ: ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ ಆಯೋಜನೆಗೆ ಮುಂದಾದ ಮಾಹೆ

ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಮಣಿಪಾಲ ಎಂಐಟಿ ವಿದ್ಯಾರ್ಥಿಯೊಬ್ಬರನ್ನು ಉಪಿಡಿ ಪೊಲೀಸರು ಮತ್ತು ಮಣಿಪಾಲ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ ಬಂಧನಕ್ಕೊಳಪಡಿಸಿದ ಬಳಿಕ ಶಿಕ್ಷಣ ಕ್ಷೇತ್ರದಲ್ಲೂ ಮಾದಕ ವಸ್ತು ಜಾಲ ಆವರಿಸಿಕೊಂಡಿದೆಯೇ ಎಂಬ ಆತಂಕ ಹೆಚ್ಚಾಗತೊಡಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಮಣಿಪಾಲ ಎಂಐಟಿ ವಿದ್ಯಾರ್ಥಿಯೊಬ್ಬರನ್ನು ಉಪಿಡಿ ಪೊಲೀಸರು ಮತ್ತು ಮಣಿಪಾಲ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ ಬಂಧನಕ್ಕೊಳಪಡಿಸಿದ ಬಳಿಕ ಶಿಕ್ಷಣ ಕ್ಷೇತ್ರದಲ್ಲೂ ಮಾದಕ ವಸ್ತು ಜಾಲ ಆವರಿಸಿಕೊಂಡಿದೆಯೇ ಎಂಬ ಆತಂಕ ಹೆಚ್ಚಾಗತೊಡಗಿದೆ. 

ಬಂಧಿತ ವಿದ್ಯಾರ್ಥಿ ಡಾರ್ಕ್ ವೆಬ್ ಮೂಲಕ ಎಂಡಿಎಂಎ ಮಾತ್ರೆಗಳನ್ನು ಮಾರಾಟ ಮಾಡುತ್ತಿದ್ದ ಎಂಬ ವಿಚಾರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. 

ಇದರಂತೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಅಧಿಕಾರಿಗಳು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿ ಗ್ರಾಹಕರನ್ನು ಹೇಗೆ ಸಂಪರ್ಕಿಸುತ್ತಿದ್ದ ಎಂಬುದರ ಕುರಿತು ವಿಚಾರಣೆ ನಡೆಸುತ್ತಿದ್ದಾರೆ. 

ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಮಣಿಪಾಲ್'ನ ವಿವಿಧ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್ ಗಳು ಬಂದ್ ಆಗಿವೆ. ರಾಜ್ಯದ ಹೊರಗಿರುವ ವಿದ್ಯಾರ್ಥಿಗಳು, ಸ್ಥಳೀಯರ ಯುವಕರನ್ನೇನಾದರೂ ಈತ ಗ್ರಾಹಕರನ್ನಾಗಿ ಮಾಡಿಕೊಂಡಿದ್ದನೇ ಎಂಬುದರ ಕುರಿತಂತೆಯೂ ತನಿಖೆ ನಡೆಸುತ್ತಿದ್ದಾರೆ. 

ಈ ನಡುವೆ ಮಾದಕ ವಸ್ತು ಮಾರಾಟ ಜಾಲಕ್ಕೆ ವಿದ್ಯಾರ್ಥಿಗಳು ಸಿಲುಕಿಕೊಳ್ಳದಂತೆ  ಮಣಿಪಾಲ್‌ ಅಕಾಡೆಮಿ ಆಫ್ ಹೈಯರ್‌ ಎಜುಕೇಶನ್‌ (ಮಾಹೆ) ಹಲವು ಜಾಗತಿ ಕಾರ್ಯಕ್ರಮಗಳನ್ನು ಆಯೋಜಿಸಲು ಮುಂದಾಗಿದೆ. 

ಮಣಿಪಾಲ್ ಶೈಕ್ಷಣಿಕ ಕೇಂದ್ರದಲ್ಲಿ ಒಟ್ಟಾರೆ 22,000 ವಿದ್ಯಾರ್ಥಿಗಳಿದ್ದಾರೆ. ಬಂಧಿತ ವಿದ್ಯಾರ್ಥಿಯಿಂದ ರೂ. 14.9 ಲಕ್ಷ ಮೌಲ್ಯದ 498 ಎಂಡಿಎಂಎ ಮಾತ್ರೆಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಎಲ್ಲಾ ಆಯಾಮದಲ್ಲಿಯೂ ತನಿಖೆ ನಡೆಸುತ್ತಿದ್ದಾರೆ. 

ಮಾಹೆ ಮಾದಕವಸ್ತು ಕೇಂದ್ರದ ಮುಖ್ಯಸ್ಥ ಡಾ.ವಿನೋದ್ ನಾಯಕ್ ಅವರು ಮಾತನಾಡಿ, ಮಾದಕ ವಸ್ತು ಸೇವನೆ ಕುರಿತಂದೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಸಾಕಷ್ಟು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಆದರೆ, ಪ್ರಸಕ್ತ ಸಾಲಿನಲ್ಲಿ ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಕಾರ್ಯಕ್ರಮ ನಡೆಸಲು ಸಾಧ್ಯವಾಗುತ್ತಿಲ್ಲ. ಪಿಜಿ ಪರೀಕ್ಷೆ ಬರೆಯುವ ಸಲುವಾಗಿ ಬಂದಿದ್ದ 800 ವಿದ್ಯಾರ್ಥಿಗಳು ಮಾತ್ರ ಪ್ರಸ್ತುತ ಕ್ಯಾಂಪಸ್ ನಲ್ಲಿದ್ದಾರೆ. ಕ್ಯಾಂಪಸ್ ನಲ್ಲಿ ಮತ್ತೆ ವಿದ್ಯಾರ್ಥಿಗಳು ಆಗಮಿಸಿದ ಬಳಿಕ ಜಾಗೃತಿ ಕಾರ್ಯಕ್ರಮಗಳನ್ನು ಪುನರಾರಂಭಿಸಲಾಗುತ್ತದೆ. ಆನ್‌ಲೈನ್ ಮೂಲಕ ಜಾಗೃತಿ ಕಾರ್ಯಕ್ರಮ ನಡೆಸುವ ಕುರಿತು ಚಿಂತನೆಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com