ಡ್ರಗ್ಸ್ ದಂಧೆ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ವಜಾ

ಮಾದಕ ವಸ್ತು ದಂಧೆ ಪ್ರಕರಣದಲ್ಲಿ ಬಂಧಿತ ನಾಲ್ವರ ಜಾಮೀನು ಅರ್ಜಿ ಮತ್ತು ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನಗರದ ಎನ್'ಡಿಪಿಎಸ್ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮಾದಕ ವಸ್ತು ದಂಧೆ ಪ್ರಕರಣದಲ್ಲಿ ಬಂಧಿತ ನಾಲ್ವರ ಜಾಮೀನು ಅರ್ಜಿ ಮತ್ತು ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನಗರದ ಎನ್'ಡಿಪಿಎಸ್ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. 

ಡ್ರಗ್ಸ್ ಮಾರಾಟ ದಂಧೆ ನಡೆಸಿರುವ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪೇಜ್-3 ಪಾರ್ಟಿ ಆಯೋಜಕ ಪ್ರಶಾಂಕ್ ರಾಂಕಾ, ನಯಾಜ್ ಮೊಹಮ್ಮದ್, ವೈಭವ್ ಜೈನ್ ಮತ್ತು ಪೆಡ್ಲರ್ ಪ್ರತೀಕ್ ಶೆಟ್ಟಿ, ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳನ್ನು ವಿಚಾರಣೆ ನಡೆಸಿದ ಎನ್'ಡಿಪಿಎಸ್ ವಿಶೇಷ ನ್ಯಾಯಾಲಯ ವಾದ-ಪ್ರತಿವಾದ ಆಲಿಸಿ ಸೋಮವಾರ ವಜಾಗೊಳಿಸಿದೆ. 

ಇದೇ ಪ್ರಕರಣದ ಆರೋಪಿಗಳಾಗಿದ್ದು, ತಲೆಮರೆಸಿಕೊಂಡಿರುವ ಅಭಿಸ್ವಾಮಿ ಮತ್ತು ಪ್ರಶಾಂತ್ ರಾಜು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ. 

ಇದೇ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿಯರಾದ ರಾಗಿಣಿ, ಸಂಜನಾ ಗಲ್ರಾನಿ ಮತ್ತು ರಾಹುಲ್ ತೋನ್ಸೆ ಜಾಮೀನು ಅರ್ಜಿ ಹಾಗೂ ತಲೆಮರೆಸಿಕೊಂಡಿರುವ ಶಿವಪ್ರಕಾಶ್ ಮತ್ತು ವಿನಯ್ ಕುಮಾರ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳು ವಜಾಗೊಂಡಿದ್ದವು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com