ಕೊರೋನಾಗೆ ಕರ್ನಾಟಕ ತತ್ತರ: ಬೆಂಗಳೂರಿನಲ್ಲಿ 5,000 ಸೇರಿ ರಾಜ್ಯದಲ್ಲಿ ದಾಖಲೆಯ 10,947 ಮಂದಿಗೆ ಪಾಸಿಟಿವ್!

ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಇಂದು 10,947 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 6,68,652ಕ್ಕೆ ಏರಿಕೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಇಂದು 10,947 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 6,68,652ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 113 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 9,547ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 5,000 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 2,62,241ಕ್ಕೆ ಏರಿಕೆಯಾಗಿದೆ.

ಇಂದು 9,832 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 5,42,906ಕ್ಕೆ ಏರಿಕೆಯಾಗಿದೆ. 1,16,153 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com