ಅಕ್ಟೋಬರ್ 10ರಂದು ಕಾಂಗ್ರೆಸ್ ರೈತ ಸಮ್ಮೇಳನ

ಮಂಡ್ಯ ಜಿಲ್ಲೆಯಲ್ಲಿ ಅ.10ರಂದು ರಾಜ್ಯ ಮಟ್ಟದ ರೈತ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ಮಸೂದೆಗಳ ವಿರುದ್ಧ ಪಕ್ಷಾತೀತವಾಗಿ ರೈತರಿಂದ ಸಹಿ ಸಂಗ್ರಹಿಸಿ ಮುಂದಿನ ಹೋರಾಟಕ್ಕೆ ಅಣಿಯಾಗುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ತಿಳಿಸಿದ್ದಾರೆ. 
ಡಿಕೆ.ಶಿವಕುಮಾರ್ ಮತ್ತು ಸುರ್ಜೇವಾಲಾ
ಡಿಕೆ.ಶಿವಕುಮಾರ್ ಮತ್ತು ಸುರ್ಜೇವಾಲಾ

ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಅ.10ರಂದು ರಾಜ್ಯ ಮಟ್ಟದ ರೈತ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ಮಸೂದೆಗಳ ವಿರುದ್ಧ ಪಕ್ಷಾತೀತವಾಗಿ ರೈತರಿಂದ ಸಹಿ ಸಂಗ್ರಹಿಸಿ ಮುಂದಿನ ಹೋರಾಟಕ್ಕೆ ಅಣಿಯಾಗುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ತಿಳಿಸಿದ್ದಾರೆ. 

ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು, ಎಐಸಿಸಿ ಆದೇಶದಂತೆ ಈ ಮೊದಲು ದಾವಣಗೆರೆಯಲ್ಲಿ ಸಮ್ಮೇಳನ ಮಾಡಲು ನಿರ್ಧರಿಸಿದ್ದೆವು. ಆದರೆ, ಆ ಜಿಲ್ಲೆಯಲ್ಲಿ ಚುನಾವಣಾ ಆಯೋಗದ ವಿಧಾನಪರಿಷತ್ ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಮಂಡ್ಯ ಜಿಲ್ಲೆಗೆ ಸ್ಥಳಾಂತರಿದ್ದೇವೆ. ಅ.10ರ ಬೆಳಗ್ಗೆ 11 ಗಂಟೆಗೆ ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು. 

ಕೃಷಿ ಮಸೂದೆ, ಎಪಿಎಂಸಿ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮೂಲಕ ರೈತರನ್ನು ಬಂಡವಾಳ ಶಾಹಿಗಲ ನಿಯಂತ್ರಣಕ್ಕೆ ನೀಡಲು ಮುಂದಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಸೆ.25ರಂದು ಕಾಂಗ್ರೆಸ್ ನಿಂದ ಪ್ರತಿಭಟನೆ ಮಾಡಿದ್ದೆವು. ಅ.2ರಂದು ಕಿಸಾನ್ ಮಜ್ದೂರ್ ದಿನ ಆಚರಿಸಿ ತಾಲೂಕು ಮಟ್ಟದಲ್ಲೂ ಹೋರಾಟ ಮಾಡಿದ್ದೆವು. ಇದೀಗ, ರೈತರ ಬೃಹತ್ ಸಮ್ಮೇಳನ ನಡೆಸಲಾಗುತ್ತಿದೆ. ಇದು ಪಕ್ಷಾತೀತ ಕಾರ್ಯಕ್ರಮ 6 ರೈತ ಮುಖಂಡರು ಈ ಸಭೆಯಲ್ಲಿ ಮಾತನಾಡಲಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸೇರಿದಂತೆ ರಾಜ್ಯ ಕಾಂಗ್ರೆಸ್ ಎಲ್ಲಾ ಪ್ರಮುಖ ನಾಯಕರು, ಮುಖಂಡರು ಭಾಗವಹಿಸಲಿದ್ದಾರೆಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com