ಶಾಲೆಗಳ ಪುನಾರಂಭ: ತಜ್ಞರ ಸಲಹೆ ಪಡೆದು ಮುಂದಿನ ನಿರ್ಧಾರ

ಶಾಲೆಗಳ ಆರಂಭಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಮಂಗಳವಾರ ಶಿಕ್ಷಣ ಇಲಾಖೆ ಅಧಿಕಾರಿಗಳು, ಕೋವಿಡ್‌ ಕಾರ್ಯಪಡೆ ಸದಸ್ಯರು ಮತ್ತು ತಜ್ಞರೊಂದಿಗೆ  ಸಭೆ ನಡೆಸಲಿದ್ದಾರೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಶಾಲೆಗಳ ಆರಂಭಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಮಂಗಳವಾರ ಶಿಕ್ಷಣ ಇಲಾಖೆ ಅಧಿಕಾರಿಗಳು, ಕೋವಿಡ್‌ ಕಾರ್ಯಪಡೆ ಸದಸ್ಯರು ಮತ್ತು ತಜ್ಞರೊಂದಿಗೆ  ಸಭೆ ನಡೆಸಲಿದ್ದಾರೆ.

ಅಧಿಕಾರಿಗಳು, ವೈದ್ಯರು, ತಾಂತ್ರಿಕ ಪರಿಣತರು ಹಾಗೂ ಶಿಕ್ಷಣ ತಜ್ಞರ ಜತೆ ಮಂಗಳವಾರ ಸಮಾಲೋಚನೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಇದೇ 15ರಿಂದ ಶಾಲಾ ಕಾಲೇಜು ತೆರೆಯಲು ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಅಧಿಕಾರ ನೀಡಿದೆ. ಹೀಗಾಗಿ, ‘ರಾಜ್ಯದಲ್ಲಿ ಎಲ್‌ಕೆಜಿ-ಯುಕೆಜಿ ಯಾವಾಗ ಆರಂಭಿಸಬಹುದು, ಆರಂಭಿಸುವುದಾದರೆ ಯಾವ ತರಗತಿಗಳನ್ನು ಮೊದಲು ಆರಂಭಿಸಬಹುದು, ಸಮುದಾಯ, ಜನಪ್ರತಿನಿಧಿಗಳಿಂದ ಯಾವ ರೀತಿಯಿಂದ ಸಹಕಾರ ನಿರೀಕ್ಷಿಸಬಹುದು ಎಂಬ ಮೂರು ವಿಷಯಗಳಿಗೆ ಸಂಬಂಧಿಸಿದಂತೆ ಸಲಹೆ ನೀಡುವಂತೆ ಶಿಕ್ಷಣ ಸಚಿವರು ಕೇಳಿದ್ದಾರೆ’ ಎಂದರು.

ಕೇಂದ್ರ ಸರ್ಕಾರ ಅ.15ರ ಬಳಿಕ ಶಾಲಾರಂಭಕ್ಕೆ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಕೊರೊನಾ ಸುರಕ್ಷೆಯೊಂದಿಗೆ ಶಾಲೆಗಳನ್ನು ಹೇಗೆ ಆರಂಭಿಸ ಬಹುದು ಎಂಬುದಕ್ಕೆ ಸಂಬಂಧಿಸಿ ಈಗಾಗಲೇ ಶಿಕ್ಷಣ ಇಲಾಖೆ ಪ್ರಮಾಣಿತ ಕಾರ್ಯಸೂಚಿ ವಿಧಾನ(ಎಸ್‌ಒಪಿ) ಸಿದ್ಧಪಡಿಸಿದೆ. ಇದಕ್ಕೆ ಆರೋಗ್ಯ ಇಲಾಖೆ ಮತ್ತು ಕಾರ್ಯಪಡೆಯ ಅನುಮೋದನೆಯೂ ಅಗತ್ಯವಿದೆ.

ಶಾಲಾರಂಭಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದ್ದರೂ ಕೇಂದ್ರ ಸರಕಾರ ಹಾಗೂ ಆರೋಗ್ಯ ಇಲಾಖೆಯ ಅನುಮತಿ ಅಗತ್ಯವಾಗಿದೆ. ಅ.15ರ ಬಳಿಕ ಪರಿಸ್ಥಿತಿ ಅವಲೋಕಿಸಿ ಶಾಲಾರಂಭಿಸಲು ಕೇಂದ್ರ ಗೃಹ ಇಲಾಖೆ ಈಗಾಗಲೇ ಅನುಮತಿ ಕಲ್ಪಿಸಿದೆ.

ಜೂನ್‌ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ತೆಗೆದುಕೊಂಡಿದ್ದ ಮುನ್ನೆಚ್ಚರಿಕೆ ಕ್ರಮಗಳನ್ನೇ ಶಾಲೆ ಆರಂಭಿಸುವ ಸಂದರ್ಭದಲ್ಲೂ ತೆಗೆದುಕೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಸಲಹೆ ನೀಡಿದ್ದಾರೆ. ಪರೀಕ್ಷೆ ವೇಳೆ ಜಾರಿಯಲ್ಲಿದ್ದ ಪ್ರಮಾಣಿತ ಕಾರ್ಯಸೂಚಿ ವಿಧಾನವನ್ನು (ಎಸ್‌ಒಪಿ) ಪರಿಷ್ಕರಿಸಿ ಶಿಕ್ಷಣ ಇಲಾಖೆಗೆ ನೀಡಲಾಗುವುದು’ ಎಂದೂ ಶ್ರೀರಾಮುಲು ಹೇಳಿದರು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com