ಕೇಂದ್ರ ಸಚಿವ ಪ್ರಲ್ಹಾದ್ ಜೋಷಿಗೆ ಕೊರೋನಾ ಪಾಸಿಟಿವ್ ದೃಢ

ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಷಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಪ್ರಲ್ಹಾದ್ ಜೋಷಿ
ಪ್ರಲ್ಹಾದ್ ಜೋಷಿ

ಬೆಂಗಳೂರು: ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಷಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಸ್ವತಃ ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅವರು, ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳು ಇಲ್ಲ. ವೈದ್ಯರ ಸಲಹೆಯಂತೆ ಹೋಂ ಕ್ವಾರಂಟೈನ್ ಆಗಿದ್ದೇನೆ ಎಂದು ತಿಳಿಸಿದ್ದಾರೆ.

ಇಂದು ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಬೆಂಗಳೂರು 10,947 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 6,68,652ಕ್ಕೆ ಏರಿಕೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com