ದೆಹಲಿ-ಬೆಂಗಳೂರು ಇಂಡಿಗೊ ವಿಮಾನದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

ದೆಹಲಿ-ಬೆಂಗಳೂರು ಇಂಡಿಗೊ ವಿಮಾನದಲ್ಲಿ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಕಳೆದ ರಾತ್ರಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೆಹಲಿ-ಬೆಂಗಳೂರು ಇಂಡಿಗೊ ವಿಮಾನದಲ್ಲಿ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಕಳೆದ ರಾತ್ರಿ ನಡೆದಿದೆ.

ಪಿಟಿಐ ಸುದ್ದಿಸಂಸ್ಥೆಗೆ ಮಾಹಿತಿ ನೀಡಿದ ಇಂಡಿಗೊ ಸಿಬ್ಬಂದಿ, ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನ ಸಂಖ್ಯೆ 6ಇ 122ರಲ್ಲಿ ಅವಧಿಗೆ ಮುನ್ನವೇ ಗಂಡು ಮಗು ಮಹಿಳೆಯೊಬ್ಬರಿಗೆ ಜನಿಸಿದೆ. ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ ಎಂದಿದ್ದಾರೆ.

ಕಳೆದ ಸಾಯಂಕಾಲ 7.30ರ ಸುಮಾರಿಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ದೆಹಲಿ-ಬೆಂಗಳೂರು ವಿಮಾನ ಸಂಖ್ಯೆ 6ಇ 122ರಲ್ಲಿ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ವಿಮಾನಯಾನ ಮೂಲಗಳು ಸುದ್ದಿಸಂಸ್ಥೆಗೆ ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com