ಈ ಬಾರಿ ಸಾರ್ವಜನಿಕರಿಗೆ ಹಾಸನಾಂಬೆ ದರ್ಶನವಿಲ್ಲ: ವಿವಿಐಪಿಗಳಿಗೆ ಮಾತ್ರ ಅವಕಾಶ- ಸಚಿವ ಗೋಪಾಲಯ್ಯ

ಕೊರೋನಾ ಸೋಂಕು ತೀವ್ರತೆ ಹಿನ್ನೆಲೆಯಲ್ಲಿ ಈ ಬಾರಿ ಹಾಸನಾಂಬೆ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಸ್ಪಷ್ಟಪಡಿಸಿದ್ದಾರೆ.
ಹಾಸನಾಂಬೆ ದೇವಾಲಯ
ಹಾಸನಾಂಬೆ ದೇವಾಲಯ

ಹಾಸನ: ಕೊರೋನಾ ಸೋಂಕು ತೀವ್ರತೆ ಹಿನ್ನೆಲೆಯಲ್ಲಿ ಈ ಬಾರಿ ಹಾಸನಾಂಬೆ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಸ್ಪಷ್ಟಪಡಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಾಸನ ನಗರದ ಅಧಿದೇವತೆ ಹಾಸನಾಂಬೆ ಜಾತ್ರೆ ನಡೆಸುವ ಬಗ್ಗೆ ಜಿಲ್ಲೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿವರ್ಷದಂತೆ ಸಾರ್ವಜನಿಕರಿಗೆ ಹಾಸನಾಂಬ ದರ್ಶನಕ್ಕೆ ಅವಕಾಶ ನೀಡದೆ ದೇವಸ್ಥಾನ ತರೆಯುವ ನ.೫ ರಂದು ಮಾತ್ರ ವಿವಿಐಪಿಗಳಿಗೆ ದರ್ಶನ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು. 

ದೇವ ಸ್ಥಾನದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯ ಎಂದು ಸ್ಪಷ್ಪಪಡಿಸಿದರು.

ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಿದರೆ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಿದ್ದು ಈ ಹಿನ್ನಲೆಯಲ್ಲಿ ಇಂತಹ ಕ್ರಮ ವಹಿಸಲಾಗಿದೆ . ನಗರದ ೧೨ ಕಡೆ ದೊಡ್ಡ ಪರದೆಯ ಮೂಲಕ ಹಾಸನಾಂಬೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಸಚಿವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com