ಹವಾಲಾ ದಂಧೆಯಲ್ಲಿ ತೊಡಗಿದ್ದ ಇಬ್ಬರ ಬಂಧನ: 4.50 ಲಕ್ಷ ರೂ. ವಶ

ಹವಾಲಾ ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು 4.50 ಲಕ್ಷ ರೂ. ನಗದು ಮತ್ತು ಎರಡು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ.

Published: 09th October 2020 09:45 AM  |   Last Updated: 09th October 2020 12:15 PM   |  A+A-


file photo

ಸಂಗ್ರಹ ಚಿತ್ರ

Posted By : Manjula VN
Source : ANI

ಬೆಂಗಳೂರು: ಹವಾಲಾ ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು 4.50 ಲಕ್ಷ ರೂ. ನಗದು ಮತ್ತು ಎರಡು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ನಗರ್ತಪೇಟೆ ಪಿಆರ್ ಎಸ್ ಲೇನ್ ನಿವಾಸಿಗಳಾದ ರಾಣಾ ಸಾಮ್ಲಾ (36), ಚೇತನ್ (20) ಬಂಧಿತ ಆರೋಪಿ. ಇವರು ಗುಜರಾತ್ ಮಹಷಾಣ ಜಿಲ್ಲೆಯ ಬಿಸ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಲಾಚಡಿ ಗ್ರಾಮದವರಾಗಿದ್ದಾರೆ.

ಇವರನ್ನು ವಶಕ್ಕೆ ಪಡೆದು ಅವರಿಂದ ಕ್ರಿಕೆಟ್ ಬೆಟ್ಟಿಂಗ್ ಜೂಜಾಟಕ್ಕೆ ಸಂಬಂಧಿಸಿದ ಒಟ್ಟು 4,50,800 ರೂ.ನಗದು ಮತ್ತು 2 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದು, ಆರೋಪಿಗಳ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Stay up to date on all the latest ರಾಜ್ಯ news
Poll
Farmers_Protest1

ಹೊಸ ಕೃಷಿ ಕಾನೂನುಗಳ ಬಗ್ಗೆ ರೈತರನ್ನು ದಾರಿ ತಪ್ಪಿಸಲಾಗುತ್ತಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp