ಕಲಬುರಗಿ ವಠಾರ ಶಾಲೆಯ ನಾಲ್ಕು ಮಕ್ಕಳಲ್ಲಿ ಕೊರೊನಾ ದೃಢ

ಸೂರ್ಯ ನಗರಿ ಕಲಬುರಗಿ ಜಿಲ್ಲೆಯಲ್ಲಿ ವಠಾರ ಶಾಲೆಗೂ ಕೊರೊನಾ ತಗುಲಿದೆ.

Published: 09th October 2020 12:23 PM  |   Last Updated: 09th October 2020 12:23 PM   |  A+A-


Posted By : Raghavendra Adiga
Source : UNI

ಕಲಬುರಗಿ: ಸೂರ್ಯ ನಗರಿ ಕಲಬುರಗಿ ಜಿಲ್ಲೆಯಲ್ಲಿ ವಠಾರ ಶಾಲೆಗೂ ಕೊರೊನಾ ತಗುಲಿದೆ.

ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ವಠಾರ ಶಾಲೆಯಲ್ಲಿ ಅಭ್ಯಾಸ ಮಾಡುತಿದ್ದ ನಾಲ್ವರು ಮಕ್ಕಳಿಗೆ ಕೊರೊನಾ ಸೋಂಕು ವಕ್ಕರಿಸಿದೆ. ಈ ಮುಂಚೆ ಶಾಲೆಯ ಮುಖ್ಯೋಪಾಧ್ಯಾಯರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿಕ್ಷಕರು, ವಿದ್ಯಾರ್ಥಿಗಳಿಗೆ ಕೋವಿಡ್-19 ಪರೀಕ್ಷೆ ಗೆ ಒಳಪಡಿಸಲಾಗಿತ್ತು.

ನಂತರ 20 ಶಿಕ್ಷಕರು ಸೇರಿ 207 ವಿದ್ಯಾರ್ಥಿಗಳಿಗೆ ಕೊರೊನಾ ನೆಗೆಟಿವ್ ಬಂದಿದ್ದು, ನಾಲ್ವರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇನ್ನೂ 24 ವಿದ್ಯಾರ್ಥಿಗಳ ವರದಿ ಬರಬೇಕಿದ್ದು, ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ

Stay up to date on all the latest ರಾಜ್ಯ news
Poll
Farmers_ride_tractors1

ರೈತರು ದೆಹಲಿಯಲ್ಲಿ ತಮ್ಮ ಗಣರಾಜ್ಯೋತ್ಸವ ದಿನದ ಟ್ರಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಕೇ?


Result
ಹೌದು
ಬೇಡ
flipboard facebook twitter whatsapp