ತಕ್ಷಣಕ್ಕೆ ಶಾಲೆ ಆರಂಭಿಸುವುದಿಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ

ಕೋವಿಡ್ ತೀವ್ರವಾಗಿ ವ್ಯಾಪಿಸುತ್ತಿರುವ ನಡುವೆಯೂ ಶಾಲಾ ಕಾಲೇಜುಗಳನ್ನು ಯಾವುದೇ ಕಾರಣಕ್ಕೂ ತೆರಯುವುದಿಲ್ಲ.ಈ ಬಗ್ಗೆ ಪೋಷಕರು ಹಾಗೂ ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಶಾಲೆಗಳನ್ನು ತೆರೆಯುವ ಬಗ್ಗೆ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲವೆಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ಬೆಂಗಳೂರು: ಕೋವಿಡ್ ತೀವ್ರವಾಗಿ ವ್ಯಾಪಿಸುತ್ತಿರುವ ನಡುವೆಯೂ ಶಾಲಾ ಕಾಲೇಜುಗಳನ್ನು ಯಾವುದೇ ಕಾರಣಕ್ಕೂ ತೆರಯುವುದಿಲ್ಲ.ಈ ಬಗ್ಗೆ ಪೋಷಕರು ಹಾಗೂ ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಶಾಲೆಗಳನ್ನು ತೆರೆಯುವ ಬಗ್ಗೆ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲವೆಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಶಾಲೆಗಳನ್ನು ಆರಂಭಿಸುವ ಬಗ್ಗೆ ಪರ ವಿರೋಧ ಚೆರ್ಚೆ ನಡೆಯುತ್ತಿದ್ದು, ಈ ಬಗ್ಗೆ ಮಾಧ್ಯಮಗಳು ಕೂಡಾ ಅಭಿಯಾನ ಆರಂಭಿಸಿರುವುದನ್ನು ಗಮನಿಸಿರುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ.

ರಾಜಕೀಯ ಪಕ್ಷಗಳ ಮುಖಂಡರು ಶಾಲೆ ತೆರೆಯುವುದರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಮಕ್ಕಳ ಆರೋಗ್ಯ ದೃಷ್ಟಿಯಿಂದ ಶಾಲೆಗಳನ್ನು ಆರಂಭಿಸುವ ಮುನ್ನ ಎಲ್ಲಾ ಪಕ್ಷಗಳ ಮುಖಂಡರು, ತಜ್ಞರು,ಹಿರಿಯ ಅಧಿಕಾರಿಗಳ ಸಭೆಯನ್ನು ಕರೆದು ಸಾಧಕ ಬಾಧಕಗಳ ಬಗ್ಗೆ ಸಮಗ್ರ ಚೆರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಅಲ್ಲಿಯವರೆಗೆ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಉಂಟಾಗಿರುವ ಯಾವುದೇ ಊಹಾಪೋಹ ಮತ್ತು ವದಂತಿಗಳಿಗೆ ಕಿವಿಗೂಡಬಾರದೆಂದು ಪೋಷಕರಲ್ಲಿ ಮನವಿ ಮಾಡಿರುವ ಮುಖ್ಯಮಂತ್ರಿ, ಈ ಬಗ್ಗೆ ಜಾಗೃತಿ ಮೂಡಿಸುವಂತೆ ಮಾಧ್ಯಮಗಳಲ್ಲಿ ಕೋರುವುದಾಗಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com