ಮಂಡ್ಯದಲ್ಲಿಂದು ಕಾಂಗ್ರೆಸ್ ಪಕ್ಷದಿಂದ ರೈತ ಸಮಾವೇಶ: ಸುರ್ಜೇವಾಲಾ ಭಾಗಿ

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಭೂ ಸುಧಾರಣೆ, ಎಪಿಎಂಸಿ ಸೇರಿದಂತೆ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿರುವ ತಿದ್ದುಪಡಿ ಕಾಯ್ದೆಗಳ ವಿರುದ್ಧ ಮಂಡ್ಯ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅ.10ರಂದು ನಗರದ ಅಂಬೇಡ್ಕರ್ ಭವನದಲ್ಲಿ ರಾಜ್ಯಮಟ್ಟದ ರೈತ ಸಮಾವೇಶ ಆಯೋಜಿಸಲಾಗಿದೆ. 
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಭೂ ಸುಧಾರಣೆ, ಎಪಿಎಂಸಿ ಸೇರಿದಂತೆ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿರುವ ತಿದ್ದುಪಡಿ ಕಾಯ್ದೆಗಳ ವಿರುದ್ಧ ಮಂಡ್ಯ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅ.10ರಂದು ನಗರದ ಅಂಬೇಡ್ಕರ್ ಭವನದಲ್ಲಿ ರಾಜ್ಯಮಟ್ಟದ ರೈತ ಸಮಾವೇಶ ಆಯೋಜಿಸಲಾಗಿದೆ. 

ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಈ ರೈತ ಸಮಾವೇಶಕ್ಕೆ ಕಾಂಗ್ರೆಸ್'ನ ಘಟನಾಘಟಿ ನಾಯಕರು ಆಗಮಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಂ.ವೀರಪ್ಪಮೊಯ್ಲಿ, ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ಅನೇಕ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. 

ಈ ಕುರಿತು ಬೆಂಗಳೂರಿನಲ್ಲಿ ಮಾಹಿತಿ ನೀಡಿದ ಡಿಕೆ.ಶಿವಕುಮಾರ್ ಅವರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ರೈತ ವಿರೋಧಿ ನಡೆಗಳ ವಿರುದ್ಧ ಶನಿವಾರ ಹಮ್ಮಿಕೊಂಡಿರುವ ರೈತ ಧ್ವನಿ ಕಿಸಾನ್ ಸಮ್ಮೇಳನದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಬಹುತೇಕ ಹಿರಿಯ ನಾಯಕರು ಭಾಗವಹಿಸಲಿದ್ದಾರೆಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com